ಧಾರ್ಮಿಕ

ಶ್ರದ್ದಾಭಕ್ತಿಯಿಂದ ನೆರವೇರಿದ ಕುಶಾಲನಗರದ ಶ್ರೀ ಚೌಡೇಶ್ವರಿ ದೇವರ ವಾರ್ಷಿಕ ಪೂಜೋತ್ಸವ

ಕುಶಾಲನಗರ, ಜೂ 09: ಕುಶಾಲನಗರದ ರಥಬೀದಿಯಲ್ಲಿರುವ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ವಾರ್ಷಿಕ ಪೂಜ್ಯೋತ್ಸವು ಶ್ರಧ್ಧಾಭಕ್ತಿಯಿಂದ ನೆರವೇರಿತು.
ಕುಶಾಲನಗರ ದೇವಾಂಗ ಸಂಘದ ವತಿಯಿಂದ ನಡೆದ ಪೂಜೋತ್ಸವದಲ್ಲಿ
ವಿವಿಧ ಹೋಮ ಹವನ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.
ಬೆಳಿಗ್ಗೆ ಗಣಪತಿ ಹೋಮ, ಧ್ವಜಾರೋಹಣ,ನಂತರ ಸಮುದಾಯ ಭಾಂಧವರು ಕಾವೇರಿ ನದಿಗೆ ತೆರಳಿ ನದಿಯಲ್ಲಿ ಗಂಗಾಪೂಜೆ ನೆರವೇರಿಸಿ ಕಾವೇರಿ ನದಿಯಿಂದ ಕಳಸ ಹೊತ್ತು ಮುಖ್ಯ ರಸ್ತೆಯಲ್ಲಿ ವೀರಗಾಸೆ ನೃತ್ಯದ ಸಮ್ಮುಖದಲ್ಲಿ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಅಗಮಿಸಿದರು.
ಮದ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಅನ್ನಸಂರ್ತಪಣೆ ಕಾರ್ಯಕ್ರಮ ನಡೆಯಿತು. ಪೂಜಾ ಕೈಂಕರ್ಯಯನ್ನು ದೇವಸ್ಥಾನದ ಅರ್ಚಕ ಪ್ರಸನ್ನ ಕುಮಾರ್ ನೆರವೇರಿಸಿದರು
ಈ ಸಂದರ್ಭ ದೇವಾಂಗ ಸಂಘದ ಅಧ್ಯಕ್ಷ ಡಿ.ವಿ. ರಾಜೇಶ್, ಉಪಾಧ್ಯಕ್ಷ ಡಿ.ವಿ. ಚಂದ್ರು(ರಾಕಿ), ಪ್ರಧಾನ ಕಾರ್ಯದರ್ಶಿ ಡಿ.ಆರ್. ಕೃಷ್ಣಕುಮಾರ್, ಖಜಾಂಚಿ ಡಿ.ಜಿ. ಪ್ರದೀಪ್, ಸಹ ಕಾರ್ಯದರ್ಶಿ ಡಿ. ವಿ. ಚಂದ್ರಶೇಖರ್, ಸಂಘಟನಾ ಕಾರ್ಯದರ್ಶಿ ಡಿ. ಎನ್. ವಿನೋದ್, ಜಂಟಿ ಕಾರ್ಯದರ್ಶಿ ಡಿ. ಆರ್. ಜಯಂತ್, ಗೌರವ ಸಲಹೆಗಾರರಾದ ಡಿ.ಟಿ. ವಿಜಯೆಂದ್ರ, ಡಿ.ಎಸ್. ಕೋದಂಡರಾಮ, ಡಿ.ಟಿ. ನಾಗ್ರೇಂದ್ರ, ಡಿ.ಕೆ. ತಿಮ್ಮಪ್ಪ, ಡಿ.ಸಿ. ಜಗದೀಶ್, ಡಿ.ಸಿ. ಪ್ರಭಾಕರ್, ಹೆಚ್. ಎನ್. ಯೋಗೇಶ್, ಮಹಿಳಾ ಘಟಕದ ಪ್ರಮುಖರಾದ ಪದ್ಮಾಮಹೇಶ್, ಶುಭ ರವಿಕುಮಾರ್, ರೂಪ ಕುಮಾರ್, ಶೋಭಾ ಅನಿಲ್, ಗೀತಾ ಸೋಮಶೇಖರ್, ಶೋಭ ಸೋಮಶೆಟ್ಟಿ, ಯುವಕ ಸಂಘದ ಡಿ.ಎಸ್. ಯತೀರಾಜ್, ಡಿ.ಪಿ.ಮಧು, ಡಿ. ಪಿ.ಗಣೇಶ್, ಡಿ.ಟಿ. ರವಿಶಂಕರ್, ಸೇರಿದಂತೆ ಸಮಿತಿಯ ನಿರ್ದೇಶಕರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!