ಕಾರ್ಯಕ್ರಮ

ರೂ 7 ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಕುಶಾಲನಗರ, ಜೂ.18: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿ ಕೂಡ್ಲೂರು ಕೈಗಾರಿಕಾ ಘಟಕದಲ್ಲಿರುವ ಎಸ್. ಎಲ್.ಎನ್. ಕಾಫಿ ಸಂಸ್ಥೆಯ ವತಿಯಿಂದ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯ ರೂ. 7. ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಸರಕಾರದ ಜೊತೆಗೆ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಹೆಚ್ಚಿನ ಅಭಿವೃದ್ಧಿ ಪಡಿಸಲು ಅನುಕೂಲವಾಗುವುದು ಎಂದರು. ಮುಂದಿನ ದಿನಗಳಲ್ಲಿ ಗ್ರಾಮಸ್ಥರ ಬೇಡಿಕೆಯ ಅನುಗುಣವಾಗಿ ಸಮುದಾಯ ಭವನ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ವಹಿಸಿದ್ದರು. ಸಭೆಯಲ್ಲಿ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಎಸ್. ಎಲ್.ಎನ್ ಕಾಫಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸಾತಪ್ಪನ್, ವಿಶ್ವನಾಥನ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ದಿನೇಶ್, ಪಾರ್ವತಮ್ಮ, ಖತೀಜ, ವೀರ ಹನುಮ ಸೇವಾ ಸಮಿತಿ ಅಧ್ಯಕ್ಷರುಗಳಾದ ಎನ್ .ರಾಮೇಗೌಡ, ಮಧುಕುಮಾರ್, ಮಲ್ಲಪ್ಪ, ಸಜನ್ ಕಿಶೋರ್, ಯೋಗೇಶ್ ಗೌಡ, ವಿನಾಯಕ ಯುವಕ ಸಂಘದ ಅಧ್ಯಕ್ಷ ಸಿ.ಸಿ. ಸ್ವಾಮಿ, ಸೇರಿದಂತೆ ಚಿಕ್ಕತ್ತೂರು, ದೊಡ್ಡತ್ತೂರು,  ಗ್ರಾಮಸ್ಥರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!