ಕುಶಾಲನಗರ, ಜ 29: ವಾಲ್ನೂರು-ತ್ಯಾಗತ್ತೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಉತ್ತಯ್ಯ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಸಂದರ್ಭ ಅತಿಥಿಗಳಾಗಿ ತ್ಯಾಗತ್ತೂರಿನ
ಸೌಲಾಂಡ್ ಎಸ್ಟೇಟ್ ಮಾಲೀಕರಾದ ಜಯಪ್ರಕಾಶ್ ಹಾಗೂ ವಾಲ್ನೂರಿನ
ಕಾಫಿ ಪ್ಲಾಂಟರ್ ಬೋಸ್ ತಿಮ್ಮಯ್ಯ ಪಾಲ್ಗೊಂಡಿದ್ದರು.
ವಾಲ್ನೂರು ಗ್ರಾಪಂ ಅಧ್ಯಕ್ಷೆ ಮಂಜಳಾ ಅಧ್ಯಕ್ಷತೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಗ್ರಾಪಂ ಸದಸ್ಯ ಭುವನೇಂದ್ರ ಉದ್ಘಾಟಿಸಿದರು.
ಶಾಲಾ ಮುಖ್ಯ ಶಿಕ್ಷಕ ಬಿ.ಎನ್.ವಸಂತಕುಮಾರ್ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಯಲ್ಲಿ ಎಲ್.ಕೆ.ಜಿ.ತರಗತಿ ಪ್ರಾರಂಭಿಸುತ್ತಿದ್ದು 4 ರಿಂದ 5 ವರ್ಷ ವಯೋಮಿತಿ ಮಕ್ಕಳನ್ನು ದಾಖಲಿಸುವಂತೆ ಪೋಷಕರಿಗೆ ಮಾಹಿತಿ ನೀಡಿದರು.
ಈ ಸಂದರ್ಭ ಗ್ರಾಪಂ ಉಪಾಧ್ಯಕ್ಷ ಮನು ಮಹೇಶ್, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ಅಪ್ಸತ್ ಸೇರಿದಂತೆ ಗ್ರಾಪಂ ಸದಸ್ಯರು, ದಾನಿಗಳು, ಶಾಲಾ ಶಿಕ್ಷಕ ವೃಂದದವರು, ಪೋಷಕರು ಪಾಲ್ಗೊಂಡಿದ್ದರು.
ವಾರ್ಷಿಕೋತ್ಸವ ಅಂಗವಾಗಿ ವಾಲ್ನೂರು ತ್ಯಾಗತ್ತೂರಿನ ಗ್ರಾಮಸ್ಥರಿಗೆ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಕ್ರೀಡಾಕೂಟ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.
Back to top button
error: Content is protected !!