ಕುಶಾಲನಗರ, ನ 12: ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಮಡಿಕೇರಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳಾಗಿರುವ ಚಂಗಪ್ಪ ಮತ್ತು ತರುಣ್ ತಿಮ್ಮಯ್ಯ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದಾರೆ. ಒಟ್ಟು ಮೂವರು ವಿದ್ಯಾರ್ಥಿಗಳು ಸ್ನಾನಕ್ಕೆಂದು ನೀರಿಗೆ ಇಳಿದಿದ್ದು, ನಂತರ ಮೇಲಕ್ಕೆ ಬರಲಾಗದೇ ಇವರ ಪೈಕಿ ಚಂಗಪ್ಪ, ಮತ್ತು ತರುಣ್ ತಿಮ್ಮಯ್ಯ ಮುಳುಗಿ ಅಸು ನೀಗಿದ್ದಾರೆ ಎನ್ನಲಾಗಿದೆ. ಶೋಧ ಕಾರ್ಯ ಮುಂದುವರೆದಿದೆ.
Back to top button
error: Content is protected !!