ಮನವಿ

ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಲು ಕರವೇ ಒತ್ತಾಯ

ಕುಶಾಲನಗರ, ಜು 05 : ಕರ್ನಾಟಕದಲ್ಲಿ ದ್ವಿಭಾಷಾ ಶಿಕ್ಷಣ ನೀತಿಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ದೀಪಕ್ ಕನ್ನಡಿಗ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು
ಇಲ್ಲಿನ‌ ತಹಶೀಲ್ದಾರ್ ಕಚೇರಿ ಮುಂದೆ ಜಮಾಯಿಸಿ ಕೆಲಕಾಲ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯದ ಪಠ್ಯಕ್ರಮದಲ್ಲಿ ಕನ್ನಡ ಪ್ರಥಮ ಭಾಷೆಯಾಗಿ,ಇಂಗ್ಲೀಷ್ ದ್ವಿತೀಯ ಭಾಷೆಯಾಗಿ ಹಾಗೂ ಹಿಂದೆಯನ್ನು ತೃತೀಯ ಭಾಷೆಯಾಗಿ ಕಲಿಸಲಾಗುತ್ತಿದೆ. ರಾಜ್ಯ ಪಠ್ಯಕ್ರಮದಲ್ಲಿ ಓದುವ ಮಕ್ಕಳು ಮೂರನೇ ಭಾಷೆಯಾಗಿ ಹಿಂದಿಯನ್ನು ಕಲಿಯುವುದು ಕಡ್ಡಾಯವಾಗಿದೆ. ಮಾತ್ರವಲ್ಲ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ನೂರು ಅಂಕಗಳಿಗೆ ಹಿಂದಿ ಪರೀಕ್ಷೆಯನ್ನು ಕಡ್ಡಾಯವಾಗಿ ಬರೆಯಬೇಕಿದೆ.ತೃತೀಯ ಭಾಷೆಯಾದ ಹಿಂದಿ ವಿದ್ಯಾರ್ಥಿಗಳಿಗೆ ಅನಗತ್ಯವಾದ ಒತ್ತಡವನ್ನು ಒಡ್ಡುತ್ತಿದೆ. 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 90,794 ವಿದ್ಯಾರ್ಥಿಗಳು ತೃತೀಯ ಭಾಷೆಯಾದ ಹಿಂದಿಯಲ್ಲಿ ಅನುತ್ತೀರ್ಣರಾಗಿದ್ದಾರೆ. ಇದು ಒಟ್ಟು ವಿದ್ಯಾರ್ಥಿಗಳಲ್ಲಿ ಸುಮಾರು 21% ರಷ್ಟಿದೆ. 2025ರಲ್ಲಿ ಈ ಸಂಖ್ಯೆ 1.2 ಲಕ್ಷಕ್ಕಿಂತ ಹೆಚ್ಚಾಗಿದೆ. ಇದು ಅತ್ಯಂತ ಆಘಾತಕಾರಿ ಬೆಳವಣಿಗೆಯಾಗಿದೆ. ಇದು ಹಿಂದಿಯ ಕಡ್ಡಾಯ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಶೈಕ್ಷಣಿಕ ಹೊರೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ. ಹಿಂದಿ ಹೇರಿಕೆಗೆ ಕನ್ನಡದ ಮಕ್ಕಳ ಭವಿಷ್ಯ ಬಲಿಯಾಗುತ್ತಿದೆ.ಈ ಹಿನ್ನೆಲೆಯಲ್ಲಿ ತ್ರಿಭಾಷಾ ಸೂತ್ರದ ಕುರಿತು ರಾಷ್ಟ್ರಕವಿ ಕುವೆಂಪು ಅವರು ವಿರೋಧವನ್ನು ಸಾರಿದ್ದರು ಎಂದು ರಾಜ್ಯ ಸಂಚಾಲಕಿ ದೀಪಾ ಪೂಜಾರಿ ಹೇಳಿದರು.
ಉಪ ತಶೀಲ್ದಾರ್ ಅನಿತಾ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭ ಕರವೇ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಂಧ್ಯಾಗಣೇಶ್, ತಾಲ್ಲೂಕು ಅಧ್ಯಕ್ಷ ಅಣ್ಣಯ್ಯ, ಮಹಿಳಾ ತಾಲ್ಲೂಕು ಅಧ್ಯಕ್ಷೆ ರೂಪಾ ಗಣೇಶ್, ಯುವ ಘಟಕದ ಅಧ್ಯಕ್ಷ ವಸಂತ್ ಆಚಾರ್ಯ, ಕುಶಾಲನಗರ ಗೌರವಾಧ್ಯಕ್ಷ ರೊನಾಲ್ಡ್, ಎಲ್ಲಾ ಘಟಕಗಳ ಕಾರ್ಯದರ್ಶಿಗಳರಾದ ಶೃತಿ ಗಿರೀಶ್, ರವೀಶ್, ಕುಮಾರ್ ದೇವಾಂಗ, ಶೈಲಾ ದೇವಾಂಗ, ಘಟಕದ ಪದಾಧಿಕಾರಿಗಳು ಪಾಲ್ಗೊಂಡಿದ್ದರು

Related Articles

Leave a Reply

Your email address will not be published. Required fields are marked *

Back to top button
error: Content is protected !!