ಕುಶಾಲನಗರ, ಸೆ 01 : ಕಳೆದ 9 ವರ್ಷಗಳ ಹಿಂದೆ ಆರಂಭಗೊಂಡ ಕುಶಾಲನಗರದ ನಂ.38185 ನೇ ನಾಡಪ್ರಭು ಪತ್ತಿನ ಸಹಕಾರ ಸಂಘವು ಅಭಿವೃದ್ಧಿಯತ್ತ ಸಾಗುತ್ತಿದ್ದು, ಸಂಘದ ಲಾಭಾಂಶ ರೂ.65. ಲಕ್ಷ ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗಿದ್ದು,ಸೆ.3 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ಹೇಳಿದರು.
ಸೋಮವಾರ ಸಂಘದ ಕಚೇರಿ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘದಲ್ಲಿ 960 ಸದಸ್ಯರು ಇದ್ದು, ಎಲ್ಲಾರ ಸಹಕಾರದಿಂದ ಹಾಗೂ ಎಂ.ಡಿ.ನಾಗೇಶ್ ಮತ್ತು ಕುಟುಂಬಸ್ಥರು ದಾನ ನೀಡಿದ ನಿವೇಶನದಲ್ಲಿ ಸುಂದರವಾದ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗಿದೆ.ಇದು ನಮ್ಮ ಸಂಘದ ದೊಡ್ಡ ಸಾಧನೆ ಎಂದು ಹೇಳಿದರು.
ಇಲ್ಲಿನ ಸಿದ್ದಯ್ಯಪುರಾಣಿಕ್ ಬಡಾವಣೆ 4ನೇ ಹಂತ, ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಹತ್ತಿರ ನಿರ್ಮಾಣಗೊಂಡಿರುವ ಸಹಕಾರ ಸಂಘದ ನೂತನ ಕಟ್ಟಡವನ್ನು ಬುಧವಾರ ಬೆಳಿಗ್ಗೆ 9.30 ಗಂಟೆಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ನಿರ್ಮಲಾನಂದನಾಥ್ ಸ್ವಾಮೀಜಿ ಅವರ ಅಮೃತ ಹಸ್ತದಿಂದ ಉದ್ಘಾಟನೆಗೊಳ್ಳಲಿದೆ.ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಆಗಮಿಸಲಿದ್ದಾರೆ.ನಂತರ ಬೆಳಿಗ್ಗೆ 11 ಗಂಟೆಗೆ ಎಪಿಸಿಎಂಎಸ್ಸಿ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ವಹಿಸಲಿದ್ದಾರೆ.ಅತಿಥಿಗಳಾಗಿ ಶಾಸಕ ಡಾ.ಮಂತರ್ ಗೌಡ,ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ.ಗಣಪತಿ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಹೆಚ್.ಎನ್.ರವೀಂದ್ರ,ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಆರ್.ಶರವಣಕುಮಾರ್, ನಾಡಪ್ರಭು ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ.ಡಿ.ರಂಗಸ್ವಾಮಿ, ಸಹಕಾರ ಸಂಘಗಳ ಉಪನಿಬಂಧಕ ಹೆಚ್. ಡಿ.ರವಿಕುಮಾರ್, ಸಹಾಯಕ ನಿಬಂಧಕ ಶೈಲಜಾ ಹಾಗೂ ನಿವೇಶನ ದಾನಿ ಎಂ.ಡಿ.ನಾಗೇಶ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ನೂತನ ಕಟ್ಟಡ ಉದ್ಘಾಟನೆ ಅಂಗವಾಗಿ ಎಲ್ಲಾ ಸದಸ್ಯರಿಗೂ ನೆನಪಿನ ಕಾಣಿಕೆ ವಿತರಣೆ ಮಾಡಲಾಗುತ್ತದೆ. ಎಲ್ಲಾ ಸದಸ್ಯರು ಕಾರ್ಯಕ್ರಮಕ್ಕೆ ಹಾಜರಾಗಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಜಿ.ಬಿ.ಜಗದೀಶ್, ಸಂಸ್ಥಾಪಕ ಅಧ್ಯಕ್ಷ ಎಂ.ಡಿ.ರಂಗಸ್ವಾಮಿ, ನಿರ್ದೇಶಕರಾದ ಸಿ.ವಿ.ನಾಗೇಶ್,ಎಂ.ಡಿ.ರವಿಕುಮಾರ್, ಕೆ.ಕೆ.ಹೇಮ್ ಕುಮಾರ್ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಕೆ.ಸುನೀತಾ ಪಾಲ್ಗೊಂಡಿದ್ದರು.
Back to top button
error: Content is protected !!