ಕುಶಾಲನಗರ, ಜು. 12: ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕ ವರ್ಗದವರು ಆತ್ಮವಿಶ್ವಾಸವನ್ನು ಬೆಳೆಸಿಕೊಂಡು, ಉತ್ತಮ ಭೋದನೆಯನ್ನು ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಪರಿಶ್ರಮದಿಂದ ಕಾಲೇಜಿಗೆ ಉತ್ತಮವಾದ ಫಲಿತಾಂಶ ಬರಲು ಸಾಧ್ಯ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಿಂಟಿ ನಿರ್ದೇಶಕ ಸಿ.ಎಂ. ಮಹಾಲಿಂಗಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಜಿಲ್ಲೆಯ ಕನ್ನಡ ಸಿರಿ ಸ್ನೇಹ ಬಳಗ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅತ್ಯುತ್ತಮ ಫಲಿತಾಂಶ ನೀಡುತ್ತಿರುವ ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದಕ್ಕೆ
ಗೌರವಾಭಿನಂದನೆಯ ಸಾಧಕ ಸಿರಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತಾನಾಡಿದರು.
ಮುಂದುವರಿದು ಮಾತಾನಾಡುತ್ತಾ ಶಿಕ್ಷಣ ಸಂಸ್ಥೆಗಳೊಂದಿಗೆ ಪೋಷಕರು ಭಾವನಾತ್ಮಕ ಸಂಬಂಧ ಬೆಳೆಸುವುದರಿಂದ ಅಭಿವೃದ್ಧಿಗೆ ಸಹಕಾರಿಯಾಗುವುದು ,ಇದರಿಂದಾಗಿ ಸರಕಾರಿ ಕಾಲೇಜುಗಳಲ್ಲಿ ಉತ್ತಮವಾದ ಶಿಕ್ಷಣವನ್ನು ನೀಡುವುದರಿಂದ ವಿದ್ಯಾರ್ಥಿಗಳಿಗೆ ಶಿಕ್ಷಣದ ಬೆಳವಣಿಗೆಯ ಮೂಲಕ ಬದುಕಿಗೆ ಪೂರಕವಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಿ ನಂತರ ಮಾತಾನಾಡಿದ ಕಣಿವೆಯ ಹಿರಿಯ ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ ಮಾತಾನಾಡಿತ್ತಾ ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟವಾದ ಗುರಿಯೊಂದಿಗೆ ಸಾಗಿದಲ್ಲಿ ಅದರ ಯಶಸ್ಸನ್ನು ಕಾಣಬಹುದು ಅದಕ್ಕೆ ಪೂರಕವಾಗಿ ಉಪನ್ಯಾಸಕರ ತರಬೇತಿ , ಬೋಧನೆ ಬಹು ಮುಖ್ಯವಾಗಿರುತ್ತದೆ ,ಇದೇ ರೀತಿಯ ಫಲಿತಾಂಶದ ಜೊತೆಯಲ್ಲಿ ಉತ್ತಮ ಶಿಕ್ಷಣ ಸಂಸ್ಥೆಯಾಗಿ ಬೆಳೆಯಲ್ಲಿ ಎಂದು ಹಾರೈಸಿದರು.
ಮುಖ್ಯ ಅತಿಥಿಯಾಗಿ ಅಗಮಿಸಿದ್ದ ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಹಾಸನ ಹಾಲು ಒಕ್ಕೂಟದ ನಿರ್ದೇಶಕ ಕೆ.ಕೆ.ಹೇಮಂತ್ ಕುಮಾರ್ ಮಾತಾನಾಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ರೂವಾರಿ ಉಪನ್ಯಾಸಕರಾಗಿರುತ್ತಾರೆ, ಅವರ ಸೇವೆಯ ಮೂಲಕ ತಮ್ಮ ಜ್ಞಾನ ಬಾಂಧವ್ಯವನ್ನು ವೃಧ್ಧಿಸಿಕೊಳ್ಳಬೇಕಿದೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮದ ಮೂಲಕ ಯಶಸ್ಸು ಗಳಿಸಲು ಸಾಧ್ಯ, ವಿದ್ಯಾರ್ಥಿಗಳ ಸಾಧನೆಗೆ ಹಠ,ಛಲ,ಆತ್ಮವಿಶ್ವಾಸದ ಜೊತೆಯಲ್ಲಿ ಶಿಸ್ತು, , ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಂಡು ಸಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭ ಕನ್ನಡ ಸಿರಿ ಸ್ನೇಹ ಬಳಗ ಅಧ್ಯಕ್ಷ ಲೋಕೇಶ್ ಸಾಗರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವೃಂದವರಿಗೆ ಸನ್ಮಾನಿಸಿ, ಗೌರವ ಸಮರ್ಪಣೆ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್ ವಹಿಸಿದ್ದರು. ವೇದಿಕೆಯಲ್ಲಿ ಜೆ.ಎ.ಸಿ. ನಿಕಟ ಪೂರ್ವ ಅಧ್ಯಕ್ಷ ಎಂ.ಡಿ. ರಂಗಸ್ವಾಮಿ, ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ, ಕೂಡಿಗೆ ಕ್ಲಸ್ಟರ್ ಸಿ.ಆರ್.ಪಿ. ಕೆ. ಶಾಂತಕುಮಾರ್, ಹೆಬ್ಬಾಲೆ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕ ಅಧ್ಯಕ್ಷ. ಎಂ.ಎನ್ ಮೂರ್ತಿ , ಸೇರಿದಂತೆ ಕಾಲೇಜು ಉಪನ್ಯಾಸಕ ವೃಂದ, ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
Back to top button
error: Content is protected !!