ಸಭೆ

ಶಾಸಕರ ನೇತೃತ್ವದಲ್ಲಿ ಕುಂದು ಕೊರತೆ ಸಭೆ: ನಿವೇಶನ ರಹಿತರಿಗೆ ನಿವೇಶನ ಒದಗಿಸುವ ಭರವಸೆ

ಕುಶಾಲನಗರ, ಜು 19:
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕರ ಸಮ್ಮುಖದಲ್ಲಿ ಕುಶಾಲನಗರ ಬ್ಲಾಕ್ ನ ಪರಿಶಿಷ್ಟ ಜಾತಿ ಘಟಕದ ಮುಖಂಡರು, ಕಾರ್ಯಕರ್ತರ ಕುಂದುಕೊರತೆ ಸಭೆ ನಡೆಯಿತು.
ಸಭೆಯಲ್ಲಿ ಹಲವರು ತಮ್ಮ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಂತರ್ ಗೌಡ, ಸಂವಿಧಾನವನ್ನು ಗೌರವಿಸಿದ ಪಕ್ಷವೆಂದರೆ ಅದು ಕಾಂಗ್ರೆಸ್ ಪಕ್ಷ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹಲವು ಯೋಜನೆಗಳನ್ನು ತಂದಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಲು ಕರೆ ನೀಡಿದರು.
ಸಭೆಯಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್, ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬಿ.ಎ ವಿಜಯೇಂದ್ರ, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡುರಾವ್, ಘಟಕದ ತಾಲೂಕು ಅಧ್ಯಕ್ಷ ರಮೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭೆ ಸದಸ್ಯ ಶಿವಶಂಕರ್, ಪ್ರಮುಖರಾದ ರಮೇಶ್, ಕಿರಣ್ , ರಂಜನ್, ಇರ್ಫಾನ್ ಮತ್ತಿತರರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!