ಶಿಕ್ಷಣ

ಕುಶಾಲನಗರ ರೋಟರಿ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

ಕುಶಾಲನಗರ, ಜು. 23: ಕೂಡಿಗೆಯಲ್ಲಿರುವ
ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ನ ವತಿಯಿಂದ ಸಮವಸ್ತ್ರ ಹಾಗೂ ಶೂ ವಿತರಣೆ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನೆರವೇರಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಸಂಸ್ಥೆಯ ಅಧ್ಯಕ್ಷ ಮನು ಪೇಮಯ್ಯ ನೆರವೇರಿಸಿ ನಂತರ ಮಾತನಾಡುತ್ತಾ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಕಲಿಕೆಯ ಮೂಲಕ ತಮ್ಮ ಪ್ರತಿಭೆಯನ್ನು ಗಳಿಸಲು ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ರೋಟರಿ ಸಂಸ್ಥೆಯು ತೊಡಗಿಸಿಕೊಳ್ಳುವ ಮುಖೇನ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸವಲತ್ತುಗಳನ್ನು ನೀಡುವ ಮೂಲಕ. ವಿದ್ಯಾರ್ಜನೆಗೆ ಒತ್ತು ನೀಡಬೇಕು ಎಂಬ ಕನಸನ್ನು ನಮ್ಮ ರೋಟರಿ ಸಂಸ್ಥೆಯು ಕಳೆದ ಹಲವು ವರ್ಷಗಳಿಂದ ಹಮ್ಮಿಕೊಳ್ಳಲಾಗಿದೆ, ಅದರಂತೆಯೇ ಈ ಸಾಲಿನಲ್ಲಿ ಕೂಡಿಗೆಯ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಶೂ ಗಳನ್ನು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ನಿರಂತರ ಸೇವೆಯನ್ನು ರೋಟರಿ ಸಂಸ್ಥೆ ವತಿಯಿಂದ ಮಾಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆ ವ್ಯವಸ್ಥಾಪಕರಾದ ಬೋಸ್ ಮೊಣ್ಣಪ್ಪ ಮಾತಾನಾಡಿ ಶಾಲೆ ಅಭಿವೃದ್ಧಿಗೆ ಮತ್ತು ವಿದ್ಯಾರ್ಥಿಗಳಿಗೆ ಸಹಕಾರ ನೀಡುವ ಮೂಲಕ ಪ್ರೊತ್ಸಾಹ ನೀಡುತ್ತಿರು ರೋಟರಿ ಸಂಸ್ಥೆ ಗೆ ಅಭಿನಂದನೆ ಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ್. ರೋಟರಿ ಕ್ಲಬ್ ಹಿರಿಯ ಸದಸ್ಯರು, ನಿಕಟ ಪೂರ್ವ ಅಧ್ಯಕ್ಷರಾದ ಎಸ್. ಕೆ. ಸತೀಶ್, ಶೋಭಾ ಸತೀಶ್. ಉಲ್ಲಾಸ್ ಕೃಷ್ಣ,ಸುನಿತಾ ಮಹೇಶ್, ರುದ್ರೇಶ್ ಪಟೇಲ್, ಚಂದ್ರಶೇಖರ್, ಸ್ಥಳೀಯ ಪ್ರಮುಖರಾದ ಕಲಾವತಿ, ಪ್ರಮೋದ್, ಚರಣ್ ,ಕುಮಾರ್, ದೀಕ್ಷಿತ್ ಮಂಜುಳಾ,ಹಾಗೂ ಆಡಳಿತ ಮಂಡಳಿಯ ಸದಸ್ಯರುಗಳಾದ ಅಪ್ಪಣ್ಣ, ಅರುಣ್ ಕುಮಾರ್ ವಿಜಯ ,ಮಂಜುನಾಥ್, ಅಪ್ಪಣ್ಣ,ಆತ್ಮನಂದಪುರಿ ಸ್ವಾಮೀಜಿ ಶಾಲಾ ಮುಖ್ಯ ಶಿಕ್ಷಕಿ ಪುಷ್ಪ , ಎನ್. ಸೋಮಯ್ಯ ,ಎ ಪಿ. ಕುಸುಮ, ರೂಪಕಲಾ, ಕಾಂತರಾಜ್ ಗಣೇಶ್, ಪ್ರತಾಪ್, ಸುರೇಶ್, ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!