ಕುಶಾಲನಗರ, ಆ 04: ಕುಶಾಲನಗರ ರೋಟರಿ ಸಂಸ್ಥೆ ವತಿಯಿಂದ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ದಾಸೋಹಕ್ಕಾಗಿ ಉಚಿತ ತಟ್ಟೆ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕುಶಾಲನಗರ ಘಟಕದ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷ ಸತೀಶ್ ಮಾತನಾಡಿ, ಸಣ್ಣ-ಸಣ್ಣ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಸಾಧನೆಯತ್ತ ಮುಖ ಮಾಡಬೇಕು. ಅಡಗಿರುವ ಪ್ರತಿಭೆಯನ್ನು ಹೊರಹಾಕಲು ವೇದಿಕೆಯನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಮಕ್ಕಳಲ್ಲಿ ಧೈರ್ಯವನ್ನು ತುಂಬಿದರು.
ಕುಶಾಲನಗರ ರೋಟರಿ ಸಂಸ್ಥೆಯ ಅಧ್ಯಕ್ಷ ಉಲ್ಲಾಸ್ ಕೃಷ್ಣ ಮಾತನಾಡಿ, ವಿದ್ಯಾರ್ಥಿಗಳಿಗೆ ಔಪಚಾರಿಕ ಶಿಕ್ಷಣದ ಜೊತೆಗೆ ನೈತಿಕ ಶಿಕ್ಷಣವು ಅತ್ಯಂತ ಅಗತ್ಯ ಹಾಗಾಗಿ ವಿದ್ಯಾರ್ಥಿಗಳಿಗೆ ನೈತಿಕ ಗುಣಗಳನ್ನು ಬಳಸಿಕೊಳ್ಳುವಂತೆ ಕಿವಿ ಮಾತನ್ನು ಹೇಳಿದರು.
ನಿಕಟಪೂರ್ವ ಅಧ್ಯಕ್ಷ ರಂಗಸ್ವಾಮಿ, ರೋಟರಿ ಸಂಸ್ಥೆಯ ಲೆಫ್ಟಿನೆಂಟ್ ಗೌರ್ನರ್ ನಿಖಿಲ್, ಪೂರ್ವಾಧ್ಯಕ್ಷ ನವೀನ್, ಪ್ರಮುಖರಾದ ಸಂಸ್ಥೆಯ ಮಹೇಶ್ ನಲ್ವಾಡೆ, ಆದರ್ಶ್, ರಾಣಿ ಉಲ್ಲಾಸ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿಗಾಗಿ ಉಚಿತ ವಾಟರ್ ಫಿಲ್ಟರ್ ವ್ಯವಸ್ಥೆ , ಉಚಿತ ಊಟದ ತಟ್ಟೆ ವಿತರಣೆ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆಬ್ಬಾಲೆ ವಿದ್ಯಾ ವರ್ಧಕ ಸಂಸ್ಥೆಯ ಅಧ್ಯಕ್ಷರಾದ ಹೆಚ್ ಎಲ್ ರಮೇಶ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳಾದ ನಾಗೇಂದ್ರ, ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಬಸವರಾಜ ಶೆಟ್ಟಿ, ಪ್ರಾಂಶುಪಾಲರಾದ ಎನ್ ಎನ್ ಧರ್ಮಪ್ಪ, ಶಿಕ್ಷಕ ವರ್ಗದವರು, ಉಪನ್ಯಾಸಕ ವರ್ಗದವರು, ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು, ಕಾರ್ಯಕ್ರಮದಲ್ಲಿ ಶಿಕ್ಷಕಿ ಡಿ ಕವಿತಾ ಸರ್ವರನ್ನು ಸ್ವಾಗತಿಸಿದರು. ಸಿ ಡಿ ಲೋಕೇಶ್ ರವರು ಎಲ್ಲರಿಗೂ ವಂದಿಸಿದರು. ಎನ್ ವೆಂಕಟನಾಯಕ್ ಕಾರ್ಯಕ್ರಮವನ್ನು ನಿರೂಪಿಸಿದರು.
Back to top button
error: Content is protected !!