ಕುಶಾಲನಗರ, ಆ 01:ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದ ನಿವಾಸಿಯಾದ ಶ್ರೀ ಬೊಟ್ಟೋಳಂಡ ಉತ್ತಮ್ ಮುತ್ತಪ್ಪ ರವರ ದಾಸ್ತಾನು ಕೊಠಡಿಯಲ್ಲಿ ಇಟ್ಟಿದ್ದ ಅಂದಾಜು 10 ಚೀಲ ಒಣಗಿದ ಕರಿಮೆಣಸು ಅಂದಾಜು 01 ಚೀಲ ಕಾಫಿಯನ್ನು ದಿ: 09-06-2025 ರಂದು ಕಳ್ಳತನವಾಗಿರುವ ಕುರಿತು ದೂರು ಸ್ವೀಕರಿಸಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 306 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಅಧಿಕಾರಿ & ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಪರಾಧ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಸಾಕ್ಷಾಧಾರಗಳನ್ನು ಕಲೆ ಹಾಕಿ ತನಿಖೆ ಕೈಗೊಳ್ಳಲಾಗಿರುತ್ತದೆ.
ಸದರಿ ಪ್ರಕರಣಗಳ ಆರೋಪಿಗಳ ಪತ್ತೆಗಾಗಿ ಶ್ರೀ ಸೂರಜ್ ಪಿ.ಎ, ಡಿಎಸ್ಪಿ ಮಡಿಕೇರಿ ಉಪ ವಿಭಾಗ, ಶ್ರೀ ಚಂದ್ರಶೇಖರ್.ಹೆಚ್.ವಿ, ಪಿಐ, ಮಡಿಕೇರಿ ಗ್ರಾಮಾಂತರ ಪೊ.ಠಾ, ಶ್ರೀ ವೆಂಕಟ್.ಹೆಚ್.ಈ, ಪಿಎಸ್ಐ, ಮಡಿಕೇರಿ ಗ್ರಾಮಾಂತರ ಪೊ.ತಾ ಮತ್ತು ಠಾಣೆಯ ಅಪರಾಧ ಪತ್ತೆ ಸಿಬ್ಬಂದಿಗಳು ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ: 01-08-2025 ರಂದು 12 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.
ಆರೋಪಿಗಳ ವಿವರ:
1. ಬಿ.ಇ.ಪ್ರಕಾಶ್ ಪೂಜಾರಿ, 40 ವರ್ಷ, 7 ನೇ ಹೊಸಕೋಟೆ.
2. ಎಂ.ಎ.ಶೇಖರ್, 54 ವರ್ಷ, ಚೆಟ್ಟಿಮಾನಿ ಗ್ರಾಮ.
Back to top button
error: Content is protected !!