ಸುದ್ದಿಗೋಷ್ಠಿ

ಆ.15 ರಂದು ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಸದಸ್ಯತ್ವ ನೋಂದಣಿಗೆ ಚಾಲನೆ

ಕುಶಾಲನಗರ, ಆ 13: ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆ.15 ರಂದು ಚಾಲನೆ ನೀಡಲಾಗುವುದು ಎಂದು ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವಿ.ಪಿ.ಶಶಿಧರ್ ತಿಳಿಸಿದರು.
ಶಾಲೆಯಲ್ಲಿ ನಡೆದ‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿವೃತ್ತ ಹಿರಿಯ ಶಿಕ್ಷಕ‌ ನಜೀರ್ ಮಾಸ್ಟರ್ ಅವರ ಸಮಕ್ಷಮದಲ್ಲಿ ಸದಸ್ಯತ್ವ ಆಂದೋಲನಕ್ಕೆ ಚಾಲನೆ‌ ನೀಡಲಾಗುವುದು. ಸದಸ್ಯತ್ವ ಪಡೆದವರು ಮುಂದಿನ ದಿನಗಳಲ್ಲಿ ಸಮಿತಿ ಜವಾಬ್ದಾರಿ, ಅಧಿಕಾರ ಹೊಂದಲು ಅರ್ಹತೆ ಪಡೆದುಕೊಳ್ಳಲಿದ್ದಾರೆ. ಈಗಾಗಲೆ ಶತಮಾನೋತ್ಸವ ಭವನ ನಿರ್ಮಾಣ ಗುರಿ ಹೊಂದಲಾಗಿದ್ದು ಶಾಲೆಯ ಹಳೆಯ ಸಭಾಂಗಣ ಸ್ಥಳದಲ್ಲಿ ರೂ 6 ಕೋಟಿ ವೆಚ್ಚದಲ್ಲಿ ಭವ್ಯವಾದ ಭವನ ನಿರ್ಮಾಣ ಕಾರ್ಯಕ್ಕೆ ಶೀಘ್ರದಲ್ಲೇ ಚಾಲನೆ‌ ನೀಡಲಾಗುವುದು. ಸರಕಾರ ಸೇರಿದಂತೆ ಜನಪ್ರತಿನಿಧಿಗಳು ಅನುದಾನ ಒದಗಿಸಲು ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಆ 15 ರ ಸಂಜೆ 4.30 ಕ್ಕೆ ಸದಸ್ಯತ್ವ ನೋಂದಣಿ ಕಾರ್ಯಕ್ರಮ‌ ನಡೆಯಲಿದೆ. ಆನ್ ಲೈನ್ ಮೂಲಕ ಕೂಡ ಸದಸ್ಯತ್ವ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಸರಿಸುಮಾರು 2 ಸಾವಿರ ಸದಸ್ಯತ್ವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭ ಸಮಿತಿ ಉಪಾಧ್ಯಕ್ಷ ಎಂ.ವಿ.ನಾರಾಯಣ್, ಟಿ.ಆರ್.ಶರವಣಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಕೆ.ನಾಗೇಂದ್ರ ಬಾಬು, ಕಾರ್ಯದರ್ಶಿ ಮೊಹಿದ್ದಿನ್, ಸಹ ಕಾರ್ಯದರ್ಶಿ ಕೆ.ಎನ್.ದೇವರಾಜ್, ಮಾಧ್ಯಮ ಕಾರ್ಯದರ್ಶಿ ಲೋಕೇಶ್ ಸಾಗರ್, ವನಿತಾ ಚಂದ್ರಮೋಹನ್, ಸಂಘಟನಾ ಕಾರ್ಯದರ್ಶಿ ಹೆಚ್.ಎಂ.ಚಂದ್ರು, ನಿರ್ದೇಶಕರಾದ ವಿ.ಎಸ್.ಆನಂದಕುಮಾರ್, ಬಿ.ಆರ್.ನಾಗೇಂದ್ರ ಪ್ರಸಾದ್, ಲತಾ ನಂದಕುಮಾರ್, ರಾಜಶೇಖರ್‌, ಡಿ.ವಿ.ರಾಜೇಶ್, ಚಂದನ್, ಹೆಚ್.ಟಿ.ವಸಂತ, ಜಿತು ಪುರಿ, ಮುಖ್ಯ ಶಿಕ್ಷಕಿ ಭಾರತಿ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!