ಕಾರ್ಯಕ್ರಮ

ಕುಶಾಲನಗರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸ್ವಾತಂತ್ರೋತ್ಸವ ಆಚರಣೆ

ಕುಶಾಲನಗರ, ಆ 15: ಕುಶಾಲನಗರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಜಿಎಂಪಿ ಶಾಲಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರೂ ಆದ ತಹಸೀಲ್ದಾರ್ ಕಿರಣ್ ಜಿ. ಗೌರಯ್ಯ ಧ್ವಜಾರೋಹಣ ನೆರವೇರಿಸಿದರು.
ಕುಶಾಲನಗರದ
ವಿವಿಧ ಶಾಲಾ ಕಾಲೇಜು, ಪೊಲೀಸ್, ಎನ್ ಸಿಸಿ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಪಥಸಂಚಲನ‌ ತಂಡಗಳಿಂದ ಗಣ್ಯರು ಗೌರವ ವಂದನೆ ಸ್ವೀಕರಿಸಿದರು.

ದಿನದ‌ ಮಹತ್ವದ ಕುರಿತು ತಹಸೀಲ್ದಾರ್ ಕಿರಣ್ ಗೌರಯ್ಯ ಸಂದೇಶ ನೀಡಿದರು.

ನಿವೃತ್ತ ಪ್ರಾಂಶುಪಾಲ ಡಾ.ಡಿ. ದೇವರಾಜ್
ಮುಖ್ಯ ಭಾಷಣ ಮಾಡಿದರು.

ಈ ಸಂದರ್ಭ ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ, ಉಪಾಧ್ಯಕ್ಷೆ ಪುಟ್ಟಲಕ್ಷ್ಮಿ, ಸದಸ್ಯೆ ಸುರಯ್ಯಭಾನು, ಮುಖ್ಯಾಧಿಕಾರಿ ಗಿರೀಶ್, ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಡಿವೈಎಸ್ಪಿ ಚಂದ್ರಶೇಖರ್ ಅತಿಥಿಗಳಾಗಿ ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!