ಕುಶಾಲನಗರ, ಏ 10:ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ 600 ಅಂಕಗಳಿಗೆ 584 ಅಂಕಗಳನ್ನು ಗಳಿಸುವ ಮೂಲಕ ಜಿಲ್ಲೆಗೆ ದ್ವಿತೀಯ ಸ್ಥಾನವನ್ನು ಗಳಿಸಿದ ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ವಿದ್ಯಾರ್ಥಿನಿ
ನಂದಿತಾ ಅವರನ್ನು ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಡಾ.ಬಿ.ಎ.ದಿನೇಶ್ ಶೆಟ್ಟಿ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಕಾಲೇಜು ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಂದಿತಾ ಹಾಗೂ ಅವರ ಪೋಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಕರವೇ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕ ಎಂ ಎಸ್ ಮಣಿಕಂಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ,ಜಿಲ್ಲಾ ಉಪಾಧ್ಯಕ್ಷೆ ನಿರ್ಮಲಾ ಸುರೇಶ್, ಜಿಲ್ಲಾ ಕಾರ್ಯದರ್ಶಿ ಸರಳಾ ರಾಮಣ್ಣ,ಜಿಲ್ಲಾ ಗೌರವಾಧ್ಯಕ್ಷ ನಾಗರಾಜ ಹೆಚ್ ಕಾವಲ್ ಕೊಂಡ, ಕುಶಾಲನಗರ ತಾಲ್ಲೂಕು ಅಧ್ಯಕ್ಷ ಪುಟ್ಟಸ್ವಾಮಿ, ಕಾರ್ಯದರ್ಶಿ ಅನಸೂಯಾ ಗಣೇಶ್, ಮುಖಂಡರಾದ ಪುಟ್ಟಮ್ಮ, ಗಣೇಶ ಮಾಸ್ಟರ್ ಕೂಡಿಗೆ, ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.
Back to top button
error: Content is protected !!