ಕುಶಾಲನಗರ ಡಿ 14 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ದಾವಣಗೆರೆಯಲ್ಲಿ ಇದೆ ಡಿ.23 ಮತ್ತು 24ನೇ ತಾರೀಖು ಹಮ್ಮಿಕೊಂಡಿರುವ 24ನೇ ಮಹಾ ಅಧಿವೇಶನದಲ್ಲಿ ಪಾಲ್ಗೊಳ್ಳುವ ಕುಲಾಭಾಂದವರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ವೀರಶೈವ ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಶಿವಪ್ಪ ತಿಳಿಸಿದರು.
ಕುಶಾಲನಗರ ಸುದ್ದಿ ಮನೆಯಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಿಂದ 50ಕ್ಕಿಂತ ಹೆಚ್ಚು ಜನರು ನೋಂದಾಯಿಸಿಕೊಂಡರೆ ಬಸ್ ವ್ಯವಸ್ಥೆ ಮಾಡುತ್ತೇವೆ ಎಂದರು. ಅಧಿವೇಶನದಲ್ಲಿ ಪಾಲ್ಗೊಳ್ಳಲು ನೋಂದಾಯಿಸಿಕೊಳ್ಳಲು ಕಡೆಯ ದಿನಾಂಕ ಡಿ.17. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಾಂಭಶಿವ ಮೂರ್ತಿ ಅವರಲ್ಲಿ ತಲಾ 500 ರೂಪಾಯಿ ನೀಡಿ ನೋಂದಾಯಿಸಿಕೊಳ್ಳಬೇಕು ಎಂದರು.
ದಾವಣಗೆರೆ ಜಿಲ್ಲಾ ಘಟಕದ ಅತಿಥ್ಯದಲ್ಲಿ 2 ದಿನಗಳ ಸಮಾವೇಶದಲ್ಲಿ ಉದ್ಘಾಟನೆ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಕೈಗಾರಿಕಾ, ಕೃಷಿ, ಯುವ, ಮಹಿಳಾ ಅಧಿವೇಶನಗಳು, ಸಮಾರೋಪ ಸಮಾರಂಭ ಹಾಗೂ ಸಾಂಸ್ಕೃತಿಕ ಪರಂಪರೆ ಮುಂತಾದ ವಿಷಯಗಳ ಬಗ್ಗೆ ಗೋಷ್ಠಿಗಳು ನಡೆಯಲಿದೆ ಎಂದು ತಿಳಿಸಿದರು.
ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕುಲಾಭಾಂದವರು ಭಾಗವಹಿಸಲು ಪ್ರಧಾನ ಕಾರ್ಯದರ್ಶಿ ಶಾಂಭಶಿವ ಮೂರ್ತಿ ಮನವಿ ಮಾಡಿಕೊಂಡರು.
ಜಿಲ್ಲಾ ನಿರ್ದೇಶಕ ಮಲ್ಲಿಕಾ ಗೋಷ್ಠಿಯಲ್ಲಿ ಹಾಜರಿದ್ದರು.
Back to top button
error: Content is protected !!