ಕಾರ್ಯಕ್ರಮ

ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ಕುಶಾಲನಗರ, ಆ 16: ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮ ಶಾಲೆಯ ಆವರಣದಲ್ಲಿ ನಡೆಯಿತು.
ನಿವೃತ್ತ ಶಿಕ್ಷಕ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಗೌರವಧ್ಯಕ್ಷ ನಜೀರ್ ಅಹಮ್ಮದ್ ಅವರು
ದೀಪ ಬೆಳಗಿಸಿ, ಸದಸ್ಯತ್ವ ಪುಸ್ತಕವನ್ನು ಅನಾವರಣ ಮಾಡುವ ಮೂಲಕ ಸಂಘದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು‌. ನಂತರ ಮಾತನಾಡಿದ ಅವರು, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ 1864 ರಲ್ಲಿ ಸ್ಥಾಪನೆಯಾಗಿ ಅನೇಕ ವಿದ್ಯಾರ್ಥಿಗಳಿಗೆ ಸಾಧನೆಯ ಮೆಟ್ಟಿಲಾಗಿದೆ.
ಶತಮಾನಗಳನ್ನು ಕಂಡಿರುವ ಈ ಶಾಲೆ ಕೊಡಗು ಜಿಲ್ಲೆಯಲ್ಲೇ ಅತ್ಯಂತ ಹಿರಿಯ ಶಾಲೆಯಾಗಿದೆ. ಸಮಾಜಕ್ಕೆ ಪ್ರಯೋಜನಕಾರಿಯಾದ ಕಾರ್ಯಗಳನ್ನು ಮಾಡಲು ಸಮಯಕ್ಕೆ ಕಾಯಬಾರದು. ಹಿರಿಯ ವಿದ್ಯಾರ್ಥಿಗಳು ಶಾಲೆಯನ್ನು ಅಭಿವೃದ್ಧಿ ಮಾಡಲು ಹೊರಟಿರುವ ಕಾರ್ಯವನ್ನು ಸಮಾಜ ಸದಾ ಸ್ಮರಿಸುತ್ತದೆ. ಈ ಶಾಲೆಯು ಮುಂದಿನ ದಿನಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನಾರ್ಜನೆಗೆ ಸಹಕಾರಿಯಾಗಲಿ ಎಂದು ಆಶಿಸಿದರು.

ನಿವೃತ್ತ ಮುಖ್ಯ ಶಿಕ್ಷಕ ಬಾಚರಣಿಯಂಡ ಪಿ. ಅಪ್ಪಣ್ಣ ಮಾತನಾಡಿ, ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುವ ಮೂಲಕ ಅಕ್ಷರದ ಅರಿವು ಮೂಡಿಸಿರುವ ಶಾಲೆಯ ಅಭಿವೃದ್ಧಿಗೆ ಹಿರಿಯ ವಿದ್ಯಾರ್ಥಿಗಳು ಸಂಘಟಿತರಾಗಿರುವುದು ಶ್ಲಾಘನೀಯ. ಹಿರಿಯ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಶಾಲೆಯ ಅಭಿವೃದ್ಧಿಗೆ ಶ್ರಮಿಸಲು ಹಿರಿಯ ವಿದ್ಯಾರ್ಥಿ ಸಂಘ ನಿರ್ಧರಿಸಿರುವುದು ಹೆಮ್ಮೆಯ ವಿಚಾರ. ಈಗಾಗಲೇ ಸಂಘದ ಸದಸ್ಯತ್ವ ಕಾರ್ಯವೂ ಪ್ರಗತಿಯಲ್ಲಿದೆ. ಹಳೆಯ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡು ಪ್ರಸ್ತುತ ಶಾಲೆಯಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕೈ ಜೋಡಿಸಬೇಕೆಂದು ಅವರು ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವಿ.ಪಿ‌ಶಶಿಧರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ನಿವೃತ್ತ ಶಿಕ್ಷಕ ನಜೀರ್ ಅಹಮ್ಮದ್ ರವರ ಸದಸ್ಯತ್ವವನ್ನು ನೋಂದಣಿ‌ ಮಾಡುವ ಮೂಲಕ ಅಧಿಕೃತ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಇದೇ ಸಂದರ್ಭ ನಿವೃತ್ತ ಶಿಕ್ಷಕರಾದ ನಜೀರ್ ಅಹಮ್ಮದ್, ಅಪ್ಪಣ್ಣ ಹಾಗೂ ಶಂಕರ ಶೆಟ್ಟಿ ಅವರನ್ನು ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭ ಹಿರಿಯ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷರುಗಳಾದ ಎಂ.ವಿ.ನಾರಾಯಣ್, ಟಿ.ಆರ್.ಶರವಣಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಕೆ.ನಾಗೇಂದ್ರಬಾಬು, ಕಾರ್ಯದರ್ಶಿ ಮೊಹಿದ್ದಿನ್, ಸಹ ಕಾರ್ಯದರ್ಶಿ ಕೆ.ಎನ್.ದೇವರಾಜ್, ಮಾಧ್ಯಮ ಕಾರ್ಯದರ್ಶಿ ಲೋಕೇಶ್ ಸಾಗರ್, ವನಿತಾ ಚಂದ್ರಮೋಹನ್, ಸಂಘಟನಾ ಕಾರ್ಯದರ್ಶಿ ಹೆಚ್.ಎಂ.ಚಂದ್ರು, ನಿರ್ದೇಶಕರಾದ ವಿ.ಎಸ್.ಆನಂದ್ ಕುಮಾರ್, ಎಂ.ಕೆ.ದಿನೇಶ್, ಪುಂಡರೀಕಾಕ್ಷ, ಬಿ.ಆರ್.ನಾಗೇಂದ್ರ ಪ್ರಸಾದ್, ಲತಾ, ನಂದಕುಮಾರ್, ರಾಜಶೇಖರ್, ಡಿ.ವಿ.ರಾಜೇಶ್, ಹೆಚ್.ಟಿ.ವಸಂತ್, ಜಿತು ಪುರಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಚಂದನ್ ಕುಮಾರ್ ಮತ್ತಿತರರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!