ಪ್ರಕಟಣೆ

ಅಖಿಲ ಭಾರತ ವೀರಶೈವ ಮಹಾಸಭಾದಿಂದ ಕ್ರೀಡಾಕೂಟ, ಜನಜಾಗೃತಿ ಸಭೆ, ಜಯಂತಿ ಕಾರ್ಯಕ್ರಮ

ಕುಶಾಲನಗರ, ಸೆ 26: ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ 2022-23ನೇ ಸಾಲಿನ ಕ್ರೀಡಾಕೂಟ ಮತ್ತು ಪ್ರತಿಭಾ ಪುರಸ್ಕಾರ, ಹಾನಗಲ್ ಶ್ರೀ ಕುಮಾರಸ್ವಾಮಿಗಳ 156ನೇ ಜಯಂತಿ ಹಾಗೂ ಶ್ರೀ ಶ್ರೀ ಶಿವಕುಮಾರಸ್ವಾಮಿ ಜಯಂತಿ ಮತ್ತು ಜನಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಘಟಕದ ಅಧ್ಯಲ್ಷ ಎಚ್.ವಿ.ಶಿವಪ್ಪ ತಿಳಿಸಿದರು.

ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಯುವ ಘಟಕದ ಸಹಯೋಗದಲ್ಲಿ ಅಕ್ಟೋಬರ್ 7 ಮತ್ತು 8 ರಂದು ಶನಿವಾರಸಂತೆಯ ಗಡುಗಳಲೆ ಜಯದೇವ ಜಾತ್ರಾ ಮೈದಾನದಲ್ಲಿ ಶ್ರೀ ದೊಡ್ಡವೀರ ರಾಜೇಂದ್ರ ಒಡೆಯರ್ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ಕ್ರಿಕೆಟ್, ಹಗ್ಗಜಗ್ಗಾಟದಂತಹ ಗುಂಪು ಆಟಗಳು ಹಾಗೂ ವೈಯಕ್ತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಶನಿವಾರಸಂತೆಯ ತಪೋವನ‌ ಕ್ಷೇತ್ರದ ಶ್ರೀ ಶ್ರೀ ಮಹಾಂತ ಶಿವಲಿಂಗ ಸ್ವಾಮಿಗಳು ಕ್ರೀಡಾಜ್ಯೋತಿ ಬೆಳಗಲಿದ್ದು, ಶಾಸಕ ಬಿ.ವೈ.ವಿಜೇಂದ್ರ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ.
ಅ.29 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಕುಮಾರಸ್ವಾಮಿ ಹಾಗೂ ಶಿವಕುಮಾರಸ್ವಾಮಿಗಳ ಜಯಂತಿ ಹಾಗೂ ಜನಜಾಗೃತಿ ಸಭೆ ನಡೆಯಲಿದೆ. ಸಭೆಯಲ್ಲಿ ವಿವಿಧ ಮಠಾಧಿಪತಿಗಳು ಪಾಲ್ಗೊಳ್ಳಲಿದ್ದಾರೆ.
ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸಭೆ ಹಾಗೂ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದರು.
ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರು ಮೋಕ್ಷಿಕ್ ರಾಜ್-9880180055, ಶಾಂಭ ಶಿವಮೂರ್ತಿ-9448336781 ಸಂಪರ್ಕಿಸಲು ಅವರು ಕೋರಿದರು.
ಗೋಷ್ಠಿಯಲ್ಲಿ ಘಟಕದ ಪ್ರಧಾನ ಕಾರ್ಯದರ್ಶಿ ಶಾಂಭಶಿವಮೂರ್ತಿ, ಕೋಶಾಧ್ಯಕ್ಷ ಎಚ್.ಪಿ.ಉದಯಕುಮಾರ್, ಸದಸ್ಯ ಪಿ.ಮಹದೇವಪ್ಪ,
ಕುಶಾಲನಗರ ತಾಲೂಕು ಘಟಕ ಅಧ್ಯಕ್ಷ ಎಚ್.ಎಂ.ಮಧುಸೂದನ್ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!