ಪ್ರತಿಭಟನೆ

ಕಾಂಗ್ರೆಸ್ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಸ್ತೆ ಗುಂಡಿ ಮುಚ್ಚಿ ಆಕ್ರೋಷ

ರಸ್ತೆ ತಡೆ ನಡೆಸಿ ಪ್ರತಿಭಟನೆ

ಕುಶಾಲನಗರ, ಸೆ 24: ಗುಂಡಿಮಯ ರಸ್ತೆಗಳ ಅವ್ಯವಸ್ಥೆ ಖಂಡಿಸಿ ಸೋಮವಾರಪೇಟೆ ಮಂಡಲ ಭಾರತೀಯ ಜನತಾ ಪಾರ್ಟಿ ವತಿಯಿಂದ ಕುಶಾಲನಗರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಸರಕಾರ ಆಡಳಿತ ವ್ಯವಸ್ಥೆ ವೈಫಲದಿಂದ ಕೂಡಿದೆ.
ರಾಜ್ಯದಲ್ಲಿ ಗುಂಡಿಯಲ್ಲಿ ರಸ್ತೆಯನ್ನು ಹುಡುಕುವ ವಾತಾವರಣ ಸೃಷ್ಟಿಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿ ಮುಖ್ಯಮಂತ್ರಿ ಹಾಗೂ ಕ್ಷೇತ್ರದ ಶಾಸಕರುಗಳ ವಿರುದ್ದ ಧಿಕ್ಕಾರ ಕೂಗಿದರು.
ಮಾಜಿ ಶಾಸಕ ಅಪ್ಪಚ್ಚುರಂಜನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಜಾಮೀಯಾ ಮಸೀದಿವರೆಗೆ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಐಬಿ ಮಾರ್ಗದ ರಸ್ತೆ ಗುಂಡಿಗಳಿಗೆ ಕಾಂಕ್ರೀಟ್ ಹಾಕಿ ಮುಚ್ಚಲಾಯಿತು.
ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತ ಪ್ರತಿಭಟನಾಕಾರರು ಕೆಲಕಾಲ ರಸ್ತೆ ತಡೆ ನಡೆಸಿ ರಾಜ್ಯದ ಸರಕಾರದ ವಿರುದ್ದ ಧಿಕ್ಕಾರ ಕೂಗಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಅಪ್ಪಚ್ಚುರಂಜನ್, ಕಾಂಗ್ರೆಸ್ ಸರಕಾರ ಜನ ವಿರೋಧಿ, ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ. ನಿರಂತರ ಬೆಲೆ ಏರಿಕೆ, ಭ್ರಷ್ಟಾಚಾರದಲ್ಲಿ ತೊಡಗಿದ್ದು ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಆರೋಪಿಸಿದರು.
ಈ ಸಂದರ್ಭ ಮಂಡಲ ಅಧ್ಯಕ್ಷ ಗೌತಮ್, ಉಪಾಧ್ಯಕ್ಷ ಭುವನೇಂದ್ರ, ನಗರ ಬಿಜೆಪಿ ಅಧ್ಯಕ್ಷ ಚರಣ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆರ್.ಕೆ.ಚಂದ್ರ, ಕಾರ್ಯದರ್ಶಿಗಳಾದ ರಕ್ಷಿತ್ ಮಾವಜಿ, ಇಂದಿರಾ ರಮೇಶ್, ಯುವ ಮೋರ್ಚಾದ ಸಚಿನ್, ಅವಿನಾಶ್, ಆದರ್ಶ್, ಪ್ರಮುಖರಾದ ಎಂ.ಡಿ.ಕೃಷ್ಣಪ್ಪ,‌ ಅಮೃತ್‌ ರಾಜ್, ಚಂದ್ರಶೇಖರ್ ಹೇರೂರು, ವೈಶಾಖ್, ಭಾಸ್ಕರ್ ನಾಯಕ್, ನವನೀತ್, ಸುಮನ್, ರವಿ, ಆಸಿಫ್ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!