ಕುಶಾಲನಗರ, ಸೆ 06: ಗೊಂದಿಬಸವನಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆ ಹಾಗೂ ಒಡಿಪಿ ಸಂಸ್ಥೆ ವತಿಯಿಂದ ಮಾಹಿತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಸ್ವಸಹಾಯ ಸಂಘದ ಸುಮಾರು 40 ಮಹಿಳೆಯರಿಗೆ ಅಡಿಕೆ ಸಸಿಗಳನ್ನು ವಿತರಣೆ ಮಾಡಲಾಯಿತು.
ಅತಿಥಿಯಾಗಿ ಪಾಲ್ಗೊಂಡಿದ್ದ ಪುರಸಭೆ ನಾಮನಿರ್ದೇಶಿತ ಸದಸ್ಯ ಎಂ.ಎಂ.ಪ್ರಕಾಶ್ ಮಾತನಾಡಿ, ಮಹಿಳೆಯರು ಸರಕಾರದ, ಸಂಘಸಂಸ್ಥೆಗಳಿಂದ ತಮಗಿರುವ ಸೌಲಭ್ಯಗಳ ಬಗ್ಗೆ ಅರಿತು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕಿದೆ ಎಂದರು.
ಈ ಸಂದರ್ಭ ಕೃಷಿ ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಾದ ಸ್ವರ್ಣ ಹಾಗೂ ಸಚಿನ್ ರವರು ಕೃಷಿ ಹಾಗೂ ಮೀನು ಸಾಕಣಿಕೆ ಬಗ್ಗೆ ಮಾಹಿತಿ ಒದಗಿಸಿದರು.
ಈ ಸಂದರ್ಭ ಪುರಸಭಾ ನಾಮನಿರ್ದೇಶಿತ ಸದಸ್ಯ ಜಿ.ಬಿ.ಜಗದೀಶ್, ಒಡಿಪಿ ಸಂಸ್ಥೆಯ ಕೇಂದ್ರ ಸಮಿತಿ ಅಧ್ಯಕ್ಷೆ ಫಿಲೋಮಿನಾ, ಸ್ಥಳೀಯ ಸಂಸ್ಥೆ ಅಧ್ಯಕ್ಷೆ ಉಷಾ ಸೇರಿದಂತೆ ಸದಸ್ಯರು, ಸಿಬ್ಬಂದಿಗಳು ಇದ್ದರು.
Back to top button
error: Content is protected !!