ಕುಶಾಲನಗರ, ಏ 18: ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಜಾಗಲೆ ಗ್ರಾಮದಲ್ಲಿ ಇಂದು ಸಂಜೆ ದನ ಮೇಯಿಸುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕ ಮುಝೀದ್ ರೆಹಮಾನ್ (55) ಮೇಲೆ ಹುಲಿ ದಾಳಿ ನಡೆಸಿ ಕುತ್ತಿಗೆ ಹಾಗೂ ತಲೆಬಾಗಕ್ಕೆ ಗಾಯಗೊಳಿಸಿದ ಪರಿಣಾಮ ರೆಹಮಾನ್ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಎಂದಿನಂತೆ ಮಲ್ ಚೀರ ಅವಿನಾಶ್ ಅವರಿಗೆ ಸೇರಿದ ದನಗಳನ್ನು ಗದ್ದೆಯಲ್ಲಿ ಮೇಯಿಸುತ್ತಿದ್ದಾಗ ಹುಲಿ ದಾಳಿ ನಡೆಸಿದೆ. ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಬೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Back to top button
error: Content is protected !!