ಕೂಡಿಗೆ, ನ. 20: ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ ಅವರು ಕೂಡಿಗೆ ಕ್ರೀಡಾ ಪ್ರೌಢಶಾಲೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ನಿರ್ದೇಶಕರಿಂದ ಮಾಹಿತಿ ಪಡೆದರು.
ಕ್ರೀಡಾ ಶಾಲಾ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಕುಶಲೋಪರಿ ವಿಚಾರಿಸಿದರು, ನಂತರ ಕ್ರೀಡಾ ಶಾಲೆಯ ಹಾಕಿ ಮತ್ತು ಅಥ್ಲೆಟಿಕ್ಸ್ ಮೈದಾನಕ್ಕೆ ಭೇಟಿ ನೀಡಿ ಪರಿಶೀಲಿಸಿ ವಿದ್ಯಾರ್ಥಿಗಳ ಭೋಜನ ಮಂದಿರಕ್ಕೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಹ ಭೋಜನ ಮಾಡಿದರು. ಕ್ರೀಡಾ ಶಾಲೆಯ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕಿ ವಿಸ್ಮಯಿ ಚಕ್ರವರ್ತಿ, ಕ್ರೀಡಾ ತರಬೇತುದಾರರಾದ ವೆಂಕಟೇಶ್, ದೀನಮಣಿ, ಮುಖ್ಯೋಪಾಧ್ಯಾಯ ಮುರುಳಿ ಸೇರಿದಂತೆ ಸಹ ಶಿಕ್ಷಕರರು ವಿದ್ಯಾರ್ಥಿಗಳು ಹಾಜರಿದ್ದರು.
Back to top button
error: Content is protected !!