ಕುಶಾಲನಗರ, ಸೆ 12:ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಶುಕ್ರವಾರ ರಾತ್ರಿ ಭೀಕರ ದುರಂತ ನಡೆದಿದೆ. ಗಣೇಶ ಮೆರವಣಿಗೆ ಮೇಲೆ ಕ್ಯಾಂಟರ್ ನುಗ್ಗಿ 8 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಪೊಲೀಸರು ಸ್ಥಳ ಪರಿಶೀಲಿಸಿ, ಮಾಹಿತಿ ಪಡೆಯುತ್ತಿದ್ದಾರೆ.
ಹೊಳೆನರಸೀಪುರ ಕಡೆ ಹೊರಟಿದ್ದ ಕ್ಯಾಂಟರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಅಡ್ಡ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಕ್ಯಾಂಟರ್ ಚಾಲಕ ಮೆರವಣಿಗೆ ಮೇಲೆ ವಾಹನ ಹತ್ತಿಸಿದ್ದಾನೆ. ಇದರಿಂದ ಆರು ಮಂದಿ ಮೃತಪಟ್ಟಿದ್ದು, ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
Back to top button
error: Content is protected !!