ಕುಶಾಲನಗರ, ಸೆ 15: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ/ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ /ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ರು, ನಿಷೇಧಿತ ಮಾದಕ ವಸ್ತುಗಳ ಮಾರಾಟ/ಸರಬರಾಜು/ ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸೂರಜ್.ಪಿ.ಎ. ಡಿ.ಎಸ್.ಪಿ. ಮಡಿಕೇರಿ ಉಪವಿಭಾಗ, ರಾಜು.ಪಿ.ಕೆ, ಸಿಪಿಐ, ಮಡಿಕೇರಿ ನಗರ ವೃತ್ತ ಮತ್ತು ಮಂಜುನಾಥ.ಈ, ಪಿಎಸ್ಐ, ಸಿದ್ದಾಪುರ ಪೊಲೀಸ್ ಠಾಣೆ & ಸಿಬ್ಬಂದಿಗಳು ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ: 14-09-2025 ರಂದು ಬಾಡಗ ಬಾಣಂಗಾಲ ಗ್ರಾಮದ ಮಾರ್ಗೊಲ್ಲಿ ಟಾಟಾ ಕಾಫಿ ಎಸ್ಟೇಟ್ ಜಂಕ್ಷನ್ ಬಸ್ ನಿಲ್ದಾಣದ ಬಳಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ/ಸರಬರಾಜು ಮಾಡುವ ಕುರಿತು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿ ಪಶ್ಚಿಮಬಂಗಾಳ ರಾಜ್ಯ ನಾವಿಯ ಜಿಲ್ಲೆ ಮೂಲದ ಸಿದ್ದಾಪುರದ ಮಾರ್ಗೊಲ್ಲಿ ಟಾಟಾ ಕಾಫಿ ಎಸ್ಟೇಟ್ ಲೈನ್ ಮನೆ ನಿವಾಸಿಗಳಾದ ಅರ್ಚನಾ ಸರ್ದಾರ್, (30 ವರ್ಷ) & ತಪಾನ್ ಸರ್ದಾರ್, (38 ವರ್ಷ) ಎಂಬುವವರನ್ನು 01 ಕೆ.ಜಿ 166 ಗ್ರಾಂ ಗಾಂಜಾ ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.
ಸದರಿ ಪ್ರಕರಣಗಳ ಆರೋಪಿಯನ್ನು ಪತ್ತೆ ಮಾಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಕೆ.ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ಮತ್ತು ದಿನೇಶ್ ಕುಮಾರ್.ಬಿ.ಪಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ರವರು ಶ್ಲಾಘಿಸಿರುತ್ತಾರೆ.
Back to top button
error: Content is protected !!