ಕುಶಾಲನಗರ, ನ 04: ಕುಶಾಲನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಗೆಳೆಯರ ಬಳಗದ ಆಟೋ ಚಾಲಕರು ಮತ್ತು ಮಾಲೀಕರ ಸಂಘ
ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಸಂಯುಕ್ತ ಆಶ್ರಯದಲ್ಲಿ ಪುನೀತ್ ಪರ್ವ ಕನ್ನಡೋತ್ಸವ ಕಾರ್ಯಕ್ರಮ ಶನಿವಾರ ನಡೆಯಿತು.
ಸಾರಿಗೆ ಬಸ್ ನಿಲ್ದಾಣದ ಆಟೋ ನಿಲ್ದಾಣದಲ್ಲಿ ನಡೆಸ ಕಾರ್ಯಕ್ರಮವನ್ನು ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ಕುಶಾಲನಗರ ಪಪಂ ಅಧ್ಯಕ್ಷ ಬಿ.ಜೈವರ್ಧನ್ ಉದ್ಘಾಟಿಸಿದರು.
ಕಾರ್ಯಕ್ರಮದ ಅಂಗವಾಗಿ ನೇತ್ರದಾನ ನೋಂದಣಿ ಶಿಬಿರ ಮತ್ತು ಆಯುಷ್ಮಾನ್ ಕಾರ್ಡ್ ನೋಂದಣಿ , ರಕ್ತ ಪರೀಕ್ಷೆ, ಕಫ ಪರೀಕ್ಷೆ ಶಿಬಿರ ನಡೆಯಿತು.
ಪಪಂ ಉಪಾಧ್ಯಕ್ಷೆ ಸುರಯ್ಯಭಾನು,
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಪಪಂ ಸದಸ್ಯರಾದ ಶೇಖ್ ಕಲೀಮುಲ್ಲಾ, ಪ್ರಮೋದ್ ಮುತ್ತಪ್ಪ, ಆಟೋ ಚಾಲಕರು ಮಾಲೀಕರ ಸಂಘದ ಅಧ್ಯಕ್ಷ ಮೋಹನ್, ಮಾಜಿ ಅಧ್ಯಕ್ಷ ಚಂದ್ರು, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ ಮತ್ತು ಸಂಘದ ಪದಾಧಿಕಾರಿಗಳು ಇದ್ದರು
Back to top button
error: Content is protected !!