
ಕುಶಾಲನಗರ, ಜೂ 21: ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರ ಚುನಾವಣೆ ಹಿನ್ನಲೆಯಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಈ ಸಂದರ್ಭ ಆಗಮಿಸಿ ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದರು. ಈ ಸಂದರ್ಭ ಮಾತನಾಡಿದ ಅವರು,ಅಧಿಕಾರ ಶಾಶ್ವತವಲ್ಲ. ಮುಂಬರುವ ಚುನಾವಣೆಗಳಲ್ಲಿ ಕೂಡ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಬೇಕಿದೆ. ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸುವುದು ಸರಿಯಲ್ಲ. ಪಕ್ಷದ ತತ್ವ ಸಿದ್ದಾಂತ ಚಾಚೂ ತಪ್ಪದೆ ಪಾಲಿಸುವ ಕಾರ್ಯಕರ್ತರಿಗೆ ಅವಕಾಶ ನೀಡಲು ತಾನು ಸದಾ ಬದ್ದನಾಗಿದ್ದೇನೆ ಎಂದರು. ಅಧಿಕಾರ ಪಡೆದ ನಂತರ ಪಕ್ಷ ಬೇಧ ಮರೆತು ಎಲ್ಲರನ್ನು ಸಮಾನವಾಗಿ ಕಾಣಲು ಅವರು ಕರೆ ನೀಡಿದರು. ಈ ಸಂದರ್ಭ ಸಂಘದ ಮೇಲ್ಚಾವಣಿ ನಿರ್ಮಾಣಕ್ಕೆ ಅನುದಾನ ಒದಗಿಸಲು ಮಾಜಿ ಅಧ್ಯಕ್ಷ ಕೆ.ಎಸ್.ಕೃಷ್ಣೇಗೌಡ ಮನವಿ ಸಲ್ಲಿಸಿದರು. ಇದೇ ಸಂದರ್ಭ ಚುನಾವಣೆಗೆ ಸಹಕರಿಸಿದವರನ್ನು ಶಾಸಕರು ಸನ್ಮಾನಿಸಿ ಗೌರವಿಸಿದರು.
Back to top button
error: Content is protected !!