ಕುಶಾಲನಗರ, ಅ 14: ಗುಡ್ಡೆಹೊಸೂರಿನ ಬೊಳ್ಳೂರು ಗ್ರಾಮದ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 10 ಲಕ್ಷ ಅನುದಾನ ಒದಗಿಸುವುದಾಗಿ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದರು.
ಶ್ರೀ ಬಸವೇಶ್ವರ ಚೌಡೇಶ್ವರಿ ದೇವಾಲಯ ಮುಂಭಾಗದಲ್ಲಿ 5 ಲಕ್ಷ ವೆಚ್ಚದಲ್ಲಿ 80 ಮೀ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಇದೇ ಸಂದರ್ಭ 1 ಕಿಮೀ ರಸ್ತೆಯನ್ನು ಸಂಪೂರ್ಣವಾಗಿ ಕಾಂಕ್ರೀಟಿಕರಣಗೊಳಿಸಲು ದೇವಾಲಯ ಸಮಿತಿ ಪದಾಧಿಕಾರಿಗಳು ಶಾಸಕರಲ್ಲಿ ಮನವಿ ಮಾಡಿದರು.
ಇದೇ ಸಂದರ್ಭ ದೇವಾಲಯ ಸಮಿತಿ ವತಿಯಿಂದ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ದೇವಾಲಯ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ, ಉಪಾಧ್ಯಕ್ಷ ಕಳಂಜನ ದಾದಪ್ಪ, ಕಾರ್ಯದರ್ಶಿ ಸಂತೋಷ್, ಖಜಾಂಚಿ ಷಣ್ಮುಖ, ನಿರ್ದೇಶಕರಾದ ಬಿ.ಟಿ.ಪ್ರಸನ್ನ, ಶುಭಶೇಖರ್, ದಿನೇಶ್, ವಿಶ್ವಕುಮಾರ್, ವಿಜಯಕುಮಾರ್, ಗ್ರಾಪಂ ಅಧ್ಯಕ್ಷೆ ಸೌಮ್ಯ, ಉಪಾಧ್ಯಕ್ಷ ಪ್ರವೀಣ್, ವಾರ್ಡ್ ಸದಸ್ಯರಾದ ನಿತ್ಯಾನಂದ, ನಾರಾಯಣ, ಸುಶೀಲಾ, ಪಿಡಿಒ ಸುಮೇಶ್, ಗ್ರಾಮಸ್ಥರಾದ
ನಂಗಾರು ಜಗ, ಶ್ರೀಹರ್ಷ ಮತ್ತಿತರರು ಇದ್ದರು.
Back to top button
error: Content is protected !!