ಕುಶಾಲನಗರ, ಅ 21: ಕೊಡಗು ಜಿಲ್ಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಮಾಲಿನ್ಯಕಾರಿ ಪಟಾಕಿಯನ್ನು ಸಿಡಿಸುವುದರಿಂದ ಉಂಟಾಗುವ ಅನಾಹುತಗಳು ಹಾಗೂ ದುಷ್ಪರಿಣಾಮಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತಿದೆ.
ಮಾಲಿನ್ಯಕಾರಿ ಪಟಾಕಿ ಸಿಡಿಸುವುದರಿಂದ ಕ್ಷಣಿಕ ಖುಷಿ ಸಿಗುತ್ತದೆ. ಆದರೆ, ಅಪಾಯಕಾರಿ ಹಾಗೂ ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ದುಷ್ಪರಿಣಾಮವು ದೀರ್ಘಕಾಲ ಉಳಿಯುವಂತಹದ್ದು. ಪಟಾಕಿ ಸಿಡಿಸುವಾಗ ಹೊರಬರುವ ವಿಷಾನಿಲದಿಂದ ಉಸಿರಾಟದ ಸಮಸ್ಯೆ ಎದುರಿಸಬೇಕಾಗುತ್ತದೆ.
ಆದ್ದರಿಂದ, ದೀಪಾವಳಿ ಸಂದರ್ಭದಲ್ಲಿ ಮಾಲಿನ್ಯಕಾರಿ ಪಟಾಕಿಯನ್ನು ತ್ಯಜಿಸಿ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದಂತೆ ನಾವು ಹಸಿರು ಪಟಾಕಿಗಳನ್ನು ಮಾತ್ರ ಬಳಸುವ ಮೂಲಕ
ಪರಿಸರ ಸ್ನೇಹಿ ಹಸಿರು ದೀಪಾವಳಿಯನ್ನು ಆಚರಿಸಬೇಕು ಎಂದು ಹಸಿರು ದೀಪಾವಳಿ ಆಚರಣೆಯ ಜಾಗೃತಿಯಲ್ಲಿ ಕಳೆದ 15 ವರ್ಷಗಳಿಂದ ತಮ್ಮನ್ನು ತೊಡಗಿಸಿಕೊಂಡಿರುವ ಕೊಡಗು ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಚಾಲಕರೂ ಆಗಿರುವ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮನವಿ ಮಾಡಿದ್ದಾರೆ.
ಕೊಡಗಿನಲ್ಲಿ ಕಳೆದ 15 ವರ್ಷಗಳಿಂದ ಜಿಲ್ಲಾಡಳಿತ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು , ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ನೇತೃತ್ವದಲ್ಲಿ
ಶಾಲಾ- ಕಾಲೇಜಿನಲ್ಲಿ “*ಸ್ವಚ್ಛ ದೀಪಾವಳಿ- ಸ್ವಸ್ಥ ದೀಪಾವಳಿ*” ಎಂಬ ಧ್ಯೇಯದೊಂದಿಗೆ ಶಿಕ್ಷಣ ಇಲಾಖೆಯ ವತಿಯಿಂದ
ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಮತ್ತು ಎನ್.ಎಸ್.ಎಸ್.ಸಂಸ್ಥೆಗಳ ಮೂಲಕ
ಹಣತೆ ಬೆಳಗಿಸಿ- ದೀಪಾವಳಿ ಆಚರಿಸಿ,
ಮಾಲಿನ್ಯಕಾರಿ ಪಟಾಕಿ ತ್ಯಜಿಸಿ, ದೀಪಾವಳಿ ಆಚರಿಸಿ, ಸ್ವಚ್ಛ ದೀಪಾವಳಿ- ಸ್ವಸ್ಥ ದೀಪಾವಳಿ ಆಚರಿಸೋಣ ಬನ್ನಿ.
ಸ್ವಚ್ಛ ಕೊಡಗು- ಸುಂದರ ಕೊಡಗು ಪರಿಕಲ್ಪನೆಯಡಿ ನಾವು
ಸ್ವಸ್ಥ ಸ್ವಚ್ಛ ,ಸುಂದರ ಹಾಗೂ ಹಸಿರು ಪರಿಸರ ನಿರ್ಮಿಸಲು ಉದ್ದೇಶದಿಂದ
ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಪರಿಸರ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
‘‘ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಪ್ರತಿಯೊಬ್ಬರೂ ಮಾಲಿನ್ಯಕಾರಿ ಪಟಾಕಿ ಸಿಡಿಸುವುದನ್ನು ತ್ಯಜಿಸಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸುವ ಮೂಲಕ ಮಾಲಿನ್ಯ ತಡೆಗಟ್ಟಿ ಪರಿಸರ ಸಂರಕ್ಷಣೆಗೆ ವಿಶೇಷ ಒತ್ತು ನೀಡಬೇಕು,’’ ಎಂದು ಮನವಿ ಮಾಡಲಾಗಿದೆ.
ಈ ಜನಜಾಗೃತಿ ಆಂದೋಲನದಿಂದ ಇತ್ತೀಚಿನ ವರ್ಷಗಳಲ್ಲಿ ಜಿಲ್ಲೆಯಲ್ಲಿ ಪಟಾಕಿಯ ಮಾರಾಟವು ಕ್ಷೀಣಿಸುತ್ತಾ ಬಂದಿರುವುದು ಕಂಡುಬಂದಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದಿದ್ದಾರೆ.
Back to top button
error: Content is protected !!