ಕುಶಾಲನಗರ, ಡಿ 24: ಕುಶಾಲನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಘಟಕದ ಅಧ್ಯಕ್ಷರಾಗಿ ಎಂ.ಜೆ.ಇರ್ಫಾನ್ ಅವರನ್ನು ನೇಮಕಗೊಳಿಸಲಾಗಿದೆ.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಅಲ್ಪಸಂಖ್ಯಾತರ ಘಟಕದ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಇರ್ಫಾನ್ ಅವರಿಗೆ ಅಧಿಕಾರ ವಹಿಸಲಾಯಿತು.
ಮುಂದಿನ ಒಂದು ತಿಂಗಳೊಳಗೆ ನಗರ ಸಮಿತಿ ರಚಿಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು. ಮುಂಬರುವ ಪುರಸಭೆ ಚುನಾವಣೆಯಲ್ಲಿ ಕನಿಷ್ಠ 5 ಮಂದಿ ಅಲ್ಪಸಂಖ್ಯಾತರಿಗೆ ಸ್ಪರ್ಧೆಗೆ ಅವಕಾಶ ಕಲ್ಪಿಸಬೇಕು, ಚುನಾವಣೆ ಬಳಿಕ ಇಬ್ಬರನ್ನು ನಾಮನಿರ್ದೇಶನ ಮಾಡಲು ಕೋರಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಅಲ್ಪಸಂಖ್ಯಾತರ ಘಟಕ ಕುಶಾಲನಗರ ಬ್ಪಾಕ್ ಅಧ್ಯಕ್ಷ ಅಬ್ದುಲ್ ರಜಾಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಕುಡಾ ಸದಸ್ಯ ಸಜಿ, ಬ್ಲಾಕ್ ಉಪಾಧ್ಯಕ್ಷ ಶಾಂತಪ್ಪ ಅಂಥೋಣಿ, ಕಾರ್ಯದರ್ಶಿ ಮಜೀದ್, ಜಿಲ್ಲಾ ಸಮಿತಿ ಸದಸ್ಯ ಆಶ್ರಫ್, ಡಿಸಿಸಿ ಸದಸ್ಯ ಶೇಖರ್, ಬೀದಿಬದಿ ವ್ಯಾಪಾರಿ ಘಟಕದ ಅಧ್ಯಕ್ಷ ಆದಂ ಮತ್ತಿತರರು ಇದ್ದರು.
Back to top button
error: Content is protected !!