ಕ್ರೀಡೆ

ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಕುಶಾಲನಗರ, ಅ 25:ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕೊಡಗು ಜಿಲ್ಲೆ ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜು ಕುಶಾಲನಗರ ಇವರ ಜಂಟಿ ಆಶ್ರಯದಲ್ಲಿ ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಕೂಡಿಗೆ ಕ್ರೀಡಾ ಶಾಲಾ ಮೈದಾನದಲ್ಲಿ ನಡೆಯಿತು. ಕುಶಾಲನಗರದ
ಮಹಾತ್ಮಗಾಂಧಿ ಪದವಿ ಕಾಲೇಜಿನ ಪ್ರಾಂಶುಪಾಲೆ ಲಿಖಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ರೀಡಾಪಟುಗಳು ಸ್ಪರ್ಧಾ ಮನೋಭಾವದಿಂದ ಎಲ್ಲಾ ಕ್ರೀಡೆಗಳಲ್ಲೂ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಶುಭ ಹಾರೈಸಿದರು.
ಶಿರಂಗಾಲ ಪಿಯು ಕಾಲೇಜು ಪ್ರಾಂಶುಪಾಲ ಸೋಮಚಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡಾಪಟುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ದೇಶಕ್ಕೆ ಉತ್ತಮ ಕ್ರೀಡಾಪಟುಗಳನ್ನು ತಯಾರಿ ಮಾಡಲು ಕ್ರೀಡಾ ಶಾಲೆ,ಸೈನಿಕ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ತುಂಬ ಅಗತ್ಯವಾಗಿವೆ ಎಂದರು. ಹೆಚ್ಚಿನ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ದೇಶಕ್ಕೆ ಉತ್ತಮ ಸೈನಿಕರಾಗಿ ಹಾಗೂ ಪ್ರಜೆಗಳಾಗಿ ಸೇವೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು.
ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನಾಗೇಶ್ ಅಥ್ಲೆಟಿಕ್ಸ್ ಕ್ರೀಡೆಗಳಿಗೆ ಚಾಲನೆ ನೀಡಿದರು.
ಈ ಸಂದರ್ಭ ಶನಿವಾರಸಂತೆ ಭಾರತಿ ಪಿಯು ಕಾಲೇಜಿನ ಪ್ರಾಂಶುಪಾಲ ಅಶೋಕ್,ಕೂಡಿಗೆ ಸರಕಾರಿ ಪಿಯು ಕಾಲೇಜು ಉಪನ್ಯಾಸಕ ರಮೇಶ್
ಹಾಗೂ ವಿವೇಕಾನಂದ ಪಿಯು ಕಾಲೇಜಿನ ಪ್ರಾಂಶುಪಾಲೆ
ಕ್ಲಾರ ರೇಷ್ಮಾ ಪಾಲ್ಗೊಂಡಿದ್ದರು.
ವಿದ್ಯಾರ್ಥಿ ತೇಜ ತಂಡದವರು ಪ್ರಾರ್ಥನೆ ನೆರವೇರಿಸಿದರು.
ಉಪನ್ಯಾಸಕಿ ಜ್ಯೋತಿ ಲಕ್ಷ್ಮಿ ನಿರೂಪಿದರು.ಉಪನ್ಯಾಸಕ ಗಂಗಾಧರ ವಂದಿಸಿದರು.ತೀರ್ಪುಗಾರರಾಗಿ ವಿವಿಧ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಾದ ರಂಗಸ್ವಾಮಿ,
ನಾಚಪ್ಪ ,ಚಿದಾನಂದ ಮೂರ್ತಿ,
ದಿನೇಶ್,ಶಿವಕುಮಾರ್, ಲೋಹಿತ್ ,ಪವನ್,ಸತೀಶ್ ಕಾರ್ಯನಿರ್ವಹಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!