ಕುಶಾಲನಗರ, ಜೂ 05: ಕುಶಾಲನಗರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರ ಅರಣ್ಯ ನಾಟ ಸಂಗ್ರಹಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ಗಿಡ ನೆಡುವ ಮೂಲಕ
ಮಾನ್ಯ ಸಿವಿಲ್ ನ್ಯಾಯಾಧೀಶರಾದ ಚೈತ್ರ ಎಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭ ಕುಶಾಲನಗರ ವಕೀಲರ ಸಂಘದ ಉಪಾಧ್ಯಕ್ಷ ಕೆ. ಎಸ್. ವೆಂಕಟರಮಣ ರಾವ್, ಕಾರ್ಯದರ್ಶಿ ಕೆ.ಬಿ. ಮೋಹನ್, ಆರ್ ಎಫ್ ಒ ರಕ್ಷಿತ್, ಮಂಜುನಾಥ್ ಚಿನ್ನಣ್ಣನವರು, ಡಿ ಆರ್ ಎಫ್ ಒ ಜಗದೀಶ್ ಮತ್ತು ವೆಂಕಟೇಶ್ ಸೇರಿದಂತೆ ನ್ಯಾಯಾಂಗ ಇಲಾಖೆ ಸಿಬ್ಬಂದಿಗಳು, ಅರಣ್ಯ ಇಲಾಖೆ ಸಿಬ್ಬಂದಿಗಳು ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Back to top button
error: Content is protected !!