ಟ್ರೆಂಡಿಂಗ್

ಶಿರಂಗಾಲ ಗ್ರಾಮ ಪಂಚಾಯತಿ ವತಿಯಿಂದ ಸಂವಿಧಾನ ಜಾಗೃತಿ ರಥಕ್ಕೆ ಅದ್ದೂರಿ ಸ್ವಾಗತ

ಕುಶಾಲನಗರ, ಫೆ 07: ಕೊಡಗಿನ ಗಡಿಭಾಗದ ಶಿರಂಗಾಲ ಗ್ರಾಮ ಪಂಚಾಯತಿ
ವತಿಯಿಂದ ಸಂವಿಧಾನ ಜಾಗೃತಿ ರಥಕ್ಕೆ ಅದ್ದೂರಿ ಸ್ವಾಗತ ಕೋರಲಾಯಿತು.
ಕೊಡಗಿನ ಗಡಿ ಭಾಗವಾದ ಶಿರಂಗಾಲ ಗೇಟ್ ನಿಂದ ನಾಮಧಾರಿ ಸಮುದಾಯದ ಭವನ ವರೆಗೆ ಸಂವಿಧಾನ ಜಾಗೃತಿ ರಥದ ಮೆರವಣಿಗೆ ನಡೆಯಿತು.
ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸ್ವಸಹಾಯ ಗುಂಪು ಸದಸ್ಯರು, ಆಶಾ, ಅಂಗನವಾಡಿ ಕಾರ್ಯಕರ್ತೆರು, ಗ್ರಾಮದ ವಿವಿಧ ಮಹಿಳಾ ಸಂಘಟನೆಯ ಸದಸ್ಯರು, ಅಂಬೇಡ್ಕರ್ ಸಂಘದ ಪದಾಧಿಕಾರಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ನಂತರ ಸಭಾ ಕಾರ್ಯಕ್ರಮವು ನಾಮಧಾರಿ ಸಮುದಾಯದ ಭವನದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಎಂ. ಆರ್. ಲತಾಬಾಯಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಂವಿಧಾನ ಮಹತ್ವದ ಬಗ್ಗೆ ಕಾಲೇಜಿನ ಉಪನ್ಯಾಸಕ ಎಂ.ಎಂ. ಧರ್ಮಪ್ಪ ಮಾತನಾಡಿದರು.
ಸಂವಿಧಾನ ಪೀಠಕೆಯ‌ನ್ನು ಪ್ರಾಥಮಿಕ ಶಾಲೆಯ ಶಿಕ್ಷಕಿ ಮೌಲ್ಯ ವಾಚಿಸಿದರು.
ನೋಡಲ್ ಅಧಿಕಾರಿಯಾಗಿ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದೇಗೌಡ, ಗ್ರಾಪಂ ಉಪಾಧ್ಯಕ್ಷ ಬಸವರಾಜ್ ಸೇರಿದಂತೆ ಸದಸ್ಯರು, ಗ್ರಾಮಸ್ಥರು, ವಿವಿಧ ಸಂಘಟನೆಯ ಪ್ರಮುಖರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!