ಕ್ರೀಡೆ
ಕೂಡಿಗೆಯಲ್ಲಿ ಸೋಮವಾರಪೇಟೆ ತಾ, ಕೊಡಗು ಜಿಲ್ಲಾಮಟ್ಟದ 14 ಮತ್ತು 17 ವಯೋಮಾನದ ಬಾಲಕ ಬಾಲಕಿಯರ ಕ್ರೀಡಾಕೂಟಕ್ಕೆ ಚಾಲನೆ


ಕುಶಾಲನಗರ, ನ 04: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾಶಿಕ್ಷಣ ಇಲಾಖೆ, ಕೊಡಗು ಜಿಲ್ಲೆ. ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿ, ಸೋಮವಾರಪೇಟೆ ಹಾಗೂ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಕೂಡಿಗೆ ಸಂಯುಕ್ತ ಆಶ್ರಯದಲ್ಲಿ ಸೋಮವಾರಪೇಟೆ ತಾಲ್ಲೂಕು ಹಾಗೂ ಕೊಡಗು ಜಿಲ್ಲಾಮಟ್ಟದ 14 ಮತ್ತು 17 ರ ವಯೋಮಾನದ ಬಾಲಕ ಬಾಲಕಿಯರ ಕ್ರೀಡಾಕೂಟ ಕೂಡಿಗೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.