ಕುಶಾಲನಗರ, ನ 07 : ಕರ್ನಾಟಕ ಬುದ್ಧ ಧಮ್ಮ ಸಮಿತಿಗಳ ಒಕ್ಕೂಟದ ವತಿಯಿಂದ ನ.9 ರಂದು ಭಾನುವಾರ ಕುಶಾಲನಗರ ಅಯ್ಯಪ್ಪ ದೇವಾಲಯ ರಸ್ತೆಯ ಮಹಾಲಕ್ಷ್ಮಿ ಸಭಾಂಗಣದಲ್ಲಿ ರಾಜ್ಯಮಟ್ಟದ ಬುದ್ಧ ಧಮ್ಮ ಚಿಂತನ ಮಂಥನ ಸಭೆಯನ್ನು ಏರ್ಪಡಿಸಲಾಗಿದೆ.
ಅಂದು ಬೆಳಿಗ್ಗೆ 10.30 ಗಂಟೆಗೆ ಕರ್ನಾಟಕ ಬುದ್ಧ ಧಮ್ಮ ಸಮಿತಿ ಒಕ್ಕೂಟದ ಗೌರವಾಧ್ಯಕ್ಷ ಬಿ.ಗೋಪಾಲ್ ಅವರು ಬುದ್ಧನ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಸಭೆಗೆ ಒಕ್ಕೂಟದ ಅಧ್ಯಕ್ಷ ಪ್ರೊ. ಆರ್. ಮಹದೇವಪ್ಪ, ಪ್ರಧಾನ ಕಾರ್ಯದರ್ಶಿ ಪ್ರೊ.ಹೆಚ್.ರಾಚಪ್ಪ , ಕಾರ್ಯದರ್ಶಿ ಕಾಂತಪ್ಪ ಅಲಂಗಾರ್ ಹಾಗೂ ಖಜಾಂಜಿ ಲಕ್ಷ್ಮಣ್ ಭಾಗವಹಿಸಲಿದ್ದಾರೆ. ಬುದ್ಧರ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಕಾರ್ಯಕ್ರಮ ಸಂಚಾಲಕ ಸೋಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Back to top button
error: Content is protected !!