ಕುಶಾಲನಗರ, ಜೂ 29 ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದ 33 ನೇ ವರ್ಷದ ಪ್ರತಿಷ್ಠಾಪನಾ ಉತ್ಸವ ಕಾರ್ಯಕ್ರಮ ಶ್ರಧ್ದಾಭಕ್ತಿಯಿಂದ ವಿವಿಧ ಹೋಮ ಹವನಗಳೊಂದಿಗೆ ನಡೆಯಿತು.
ಪೂಜೋತ್ಸವ ಅಂಗವಾಗಿ ಬೆಳಿಗ್ಗೆ 8 ಗಂಟೆಯಿಂದ ಶ್ರೀ ಗಣಪತಿ ಹೋಮ, ಶ್ರೀ ಮೃತ್ಯುಂಜಯ ಹೋಮ, ಪ್ರಧಾನ ದೇವರಿಗೆ ಹಾಗೂ ಇತರೆ ಉಪ ದೇವತೆಗಳಿಗೆ ವಿಶೇಷ ಅಭಿಷೇಕ, ಅರ್ಚನೆ ಇತ್ಯಾದಿ ಪೂಜಾ ಕೈಂಕರ್ಯಗಳು ಕೇರಳದ ಶಿವಕುಮಾರ್ ಜೀ, ಸಜೀತ್ ಪಣಿಕರ್ ತಂಡದಿಂದ ನಡೆಯಿತು.
ಮಧ್ಯಾಹ್ನ 1 ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ,ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಪೂಜಾ ಕಾರ್ಯಕ್ರಮದಲ್ಲಿ ಹುದುಗೂರು ಮದಲಾಪುರ, ಹಾರಂಗಿ, ಕೂಡಿಗೆ ಕೂಡುಮಂಗಳೂರು, ಕುಶಾಲನಗರ ಸೇರಿದಂತೆ ಸುತ್ತ ಮುತ್ತಲಿನ ನೂರಾರು ಭಕ್ತರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ 33 ವರ್ಷಗಳ ಕಾಲದಿಂದ ಇಂದಿನವರೆಗೆ ಆಡಳಿತ ಮಂಡಳಿಯ ಅಧ್ಯಕ್ಷ, ಕಾರ್ಯದರ್ಶಿ ಗಳನ್ನು ದೇವಾಲಯ ಸಮಿತಿಯ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ, ಕಾರ್ಯದರ್ಶಿ ಸುರೇಶ್ ಸೇರಿದಂತೆ ಸಮಿತಿಯ ನಿರ್ದೇಶಕರು ಹಾಗೂ ಸದಸ್ಯರು ಹಾಜರಿದ್ದರು.
Back to top button
error: Content is protected !!