ಕಾಮಗಾರಿ
ಕುಶಾಲನಗರ ನೂತನ ತಾಲ್ಲೂಕು ಆಡಳಿತ ಕೇಂದ್ರಕ್ಕೆ ಕಂದಾಯ ಸಚಿವರಿಂದ ಶಂಕುಸ್ಥಾಪನೆ


ಕುಶಾಲನಗರ, ನ 11: ಕುಶಾಲನಗರದ ಮಾದಾಪಟ್ಟಣ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಪಕ್ಕದಲ್ಲಿ 3 ಎಕರೆ ಪ್ರದೇಶದಲ್ಲಿ ರೂ 8.60 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ತಾಲೂಕು ಆಡಳಿತ ಕೇಂದ್ರ (ಪ್ರಜಾಸೌಧಕ್ಕೆ) ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಶಿಲನ್ಯಾಸ ನೆರವೇರಿಸಿದರು. ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟರಾಜ್, ಅಪರ ಜಿಲ್ಲಾಧಿಕಾರಿ ಐಶ್ವರ್ಯ, ಎಸ್ಪಿ ರಾಮರಾಜನ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಜಿಪಂ ಸಿಇಒ ಆನಂದ ಪ್ರಕಾಶ್ ಮೀನಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಜಿಪಂ ಮಾಜಿ ಅಧ್ಯಕ್ಷೆ ಚಂದ್ರಕಲಾ, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ತಹಸೀಲ್ದಾರ್ ಕಿರಣ್ ಜಿ ಗೌರಯ್ಯ, ಹಿರಿಯ ವಕೀಲ ಆರ್.ಕೆ.ನಾಗೇಂದ್ರ ಬಾಬು ಮತ್ತಿತರರು ಉಪಸ್ಥಿತರಿದ್ದರು.