ಅಪಘಾತ

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿಗಳ ಮೃತದೇಹ ಪತ್ತೆ

ಕುಶಾಲನಗರ, ನ 12: ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಬುಧವಾರ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಹೊರತೆಗೆಯಲಾಗಿದೆ. ಮಡಿಕೇರಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದ ಚಂಗಪ್ಪ ಮತ್ತು ತರುಣ್ ತಿಮ್ಮಯ್ಯ ಮೃತ ದುರ್ದೈವಿಗಳು. ಬುಧವಾರ ಸಂಜೆ ಚಂಗಪ್ಪ ಮೃತದೇಹ ಪತ್ತೆಯಾಗಿತ್ತು. ಗುರುವಾರ ತರುಣ್ ಮೃತದೇಹ ಪತ್ತೆಯಾಗಿದೆ. ಮೃತದೇಹಗಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕುಶಾಲನಗರ ತಾಲೂಕ ತಹಸೀಲ್ದಾರ್ ಕಿರಣ್ ಜಿ ಗೌರಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!