ಕುಶಾಲನಗರ, ಅ. 17: ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ರೈತರಿಗೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ನೀಡಲ್ಪಡುವ ಕೃಷಿಗೆ ಸಂಬಂಧಿಸಿದ ಯಂತ್ರೋಪಕರಣಗಳು, ಮತ್ತು ಕೊಳವೆ ಬಾವಿಗೆ ಸಂಬಂಧಿಸಿದ ನೀರೇತ್ತುವ ಯಂತ್ರೋಪಕರಣಗಳನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ವಿತರಣೆ ಮಾಡಿದರು.
ನಂತರ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ರೈತರಿಗೆ ವಿವಿಧ ಇಲಾಖೆಯ ಮೂಲಕ ಸರಕಾರದ ರಿಯಾಯಿತಿ ದರದಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಇದರ ಸದುಪಯೋಗವನ್ನು ರೈತರು ಪಡೆದುಕೊಂಡು ಆರ್ಥಿಕ ಮುಂದುವರೆಯಬೇಕು ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್, ಕೆ.ಪಿ.ಸಿ.ಸಿ.ಸದಸ್ಯ ನಟೇಶ್ ಗೌಡ, ಹೆಬ್ಬಾಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಅರುಣಾಕುಮಾರಿ, ಹೆಬ್ಬಾಲೆ ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷ ಹೆಚ್.ಟಿ ದಿನೇಶ್, ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು, ವಿವಿಧ ಘಟಕದ ಪದಾಧಿಕಾರಿಗಳು, ಇಲಾಖೆಯ ಅಧಿಕಾರಿ ವರ್ಗದವರು, ಸೇರಿದಂತೆ ರೈತರು ಹಾಜರಿದ್ದರು.
Back to top button
error: Content is protected !!