ಕಾರ್ಯಕ್ರಮ
ತೊರೆನೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

ಕುಶಾಲನಗರ, ನ 18: ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಕಿ), ಧಾರವಾಡ ಮತ್ತು
ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಕಾಡಾ), ಕಾವೇರಿ ಜಲಾನಯನ ಯೋಜನೆ ಹಾರಂಗಿ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಸಹಕಾರ ಮಹಾಮಂಡಳ (ನಿ.), ಕುಶಾಲನಗರ ಹಾಗೂ ತೊರೆನೂರು
ನೀರು ಬಳಕೆದಾರರ ಸಹಕಾರ ಸಂಘ, ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ, ಹಾಲು ಉತ್ಪಾದಕರ ಸಹಕಾರ ಸಂಘ ಸಂಯುಕ್ತ ಆಶ್ರಯದಲ್ಲಿ
72ನೇ ಅಖಿಲ ಭಾರತ ಸಹಕಾರ ಸಪ್ತಾಹ, ಜಲ ಮತ್ತು ನೆಲ ಸಂರಕ್ಷಣೆ, ನಿರ್ವಹಣೆ ಹಾಗೂ ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆ ಕುರಿತು ಕಾರ್ಯಗಾರ ತೊರೆನೂರು ನೀರು ಬಳಕೆದಾರರ ಸಹಕಾರ ಸಂಘದ ಕಛೇರಿ ಆವರಣದಲ್ಲಿ ನಡೆಯಿತು. ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಕಾರ್ಯಕ್ರಮ ಉದ್ಘಾಟಿಸಿದರು.
ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.
ನೀರು ಬಳಕೆದಾರರ ಮಹಾಮಂಡಳ ಅಧ್ಯಕ್ಷ ಚೌಡೇಗೌಡ ಮತ್ತಿತರರು ಇದ್ದರು.



