ಕಾರ್ಯಕ್ರಮ

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಕೊಡಗು ಜಿಲ್ಲಾ ಘಟಕದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ

ಕುಶಾಲನಗರ, ನ 20: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಕೊಡಗು ಜಿಲ್ಲಾ ಘಟಕ, ಸಂಗಮ ಟಿವಿ, ವಂಶಿ ನ್ಯೂಸ್ ಸಹಯೋಗದೊಂದಿಗೆ ಕನ್ನಡ ಸುವರ್ಣ ಸಂಭ್ರಮ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆಯಿತು.

ಕೊಡ್ಲಿಪೇಟೆ ಕಿರಿಕೊಡ್ಲಿ‌ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು.
ವೇದಿಕೆ ಜಿಲ್ಲಾಧ್ಯಕ್ಷ ಹೆಚ್.ಎಂ.ರಘು‌ಕೋಟಿ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ಕಿರಣ್ ಜಿ ಗೌರಯ್ಯ, ವೇದಿಕೆ ಸಂಸ್ಥಾಪಕ ಕೊಟ್ರೇಶ್, ಕಿರುತೆರೆ ನಟಿ ಮೀನಾಕ್ಷಿ,‌ಕರವೇ ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್, ಉದ್ಯಮಿ ಸದಾಶಿವ ಶೆಟ್ಟಿ, ಡಿ.ಆರ್.ಪ್ರಭಾಕರ್, ದಾಮೋದರ್, ಉ.ರಾ.ನಾಗೇಶ್ ಮತ್ತಿತರರು ಇದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!