ಅವ್ಯವಸ್ಥೆ

ನಂಜರಾಯಪಟ್ಟಣಕ್ಕೆ‌ ಬಿಎಸ್ಎನ್ಎಲ್ ತಂಡ ಭೇಟಿ, ಪರಿಶೀಲನೆ

ಕುಶಾಲನಗರ, ನ 21:ನಂಜರಾಯಪಟ್ಟಣ ಗ್ರಾಮಕ್ಕೆ ಬಿಎಸ್ಎನ್ಎಲ್ ತಾಂತ್ರಿಕ ಅಧಿಕಾರಿಗಳ ತಂಡ ಭೇಟಿ ನೀಡಿ ಟವರ್ ಮತ್ತು ಸಂಬಂಧಿಸಿದ ಪರಿಕರಗಳ ಪರಿಶೀಲನೆ ನಡೆಸಿತು.

ಸಂಸದ ಯದುವೀರ್ ಅವರು ಹೊಸಪಟ್ಟಣ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭ ಗ್ರಾಪಂ ಸದಸ್ಯ ಆರ್.ಕೆ.ಚಂದ್ರ ಅವರು ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆ ಬಗ್ಗೆ ಸಂಸದರ ಗಮನಕ್ಕೆ ತಂದಿದ್ದರು. ಈ‌ ಹಿನ್ನೆಲೆಯಲ್ಲಿ ಸಂಸದರ ಸೂಚನೆ ಮೇರೆಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಕರಗಳನ್ನು ತಪಾಸಣೆ ನಡೆಸಿತು. ನೆಟ್ವರ್ಕ್ ಸ್ಥಿತಿ ಉತ್ತಮಗೊಳಿಸುವ ನಿಟ್ಟಿನಲ್ಲಿ ಆಗಬೇಕಾದ ಕಾರ್ಯಗಳ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಈ ತಿಂಗಳೊಳಗೆ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.
ಈ ಸಂದರ್ಭ ಗ್ರಾಪಂ ಸದಸ್ಯ ಆರ್.ಕೆ.ಚಂದ್ರ ಮತ್ತು ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!