ಪ್ರತಿಭೆ

ಜಿಮ್ನಾಸ್ಟಿಕ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕುಶಾಲನಗರ, ನ 27:ಹೆಚ್ಎಸ್ ಜೀವನ್, ಶಿವಕುಮಾರ್ ಮತ್ತು ಪೂರ್ಣಿಮಾ ದಂಪತಿಯವರ ಸುಪುತ್ರನಾಗಿದ್ದು ಈತ ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಪ್ರಸ್ತುತ ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ, ಹಾಗೂ ಕಾಲೇಜಿಗೆ ಕೀರ್ತಿ ತಂದಿರುತ್ತಾನೆ. ಇವನಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿಗಳು ಸದಸ್ಯರು ಪ್ರಾಂಶುಪಾಲರು ದೈಹಿಕ ಶಿಕ್ಷಣ ನಿರ್ದೇಶಕರು ಉಪನ್ಯಾಸಕೃಂದದವರು ಆಡಳಿತ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟದಲ್ಲಿಯೂ ಇದೇ ರೀತಿಯಾದ ಸಾಧನೆಯನ್ನು ಮಾಡಿ ತಂದೆ ತಾಯಿಗಳಿಗೆ ಹಾಗೂ ಕಾಲೇಜಿಗೆ ಕೀರ್ತಿ ತರಲೆಂದು ಶುಭ ಹಾರೈಸಿರುತ್ತಾರೆ

Related Articles

Leave a Reply

Your email address will not be published. Required fields are marked *

Back to top button
error: Content is protected !!