ಕುಶಾಲನಗರ, ನ 30: 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದ್ದ ನಂಜರಾಯಪಟ್ಟಣ ಗ್ರಾಮಪಂಚಾಯ್ತಿಗೆ ನಾಳೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಡಿ.01 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾನ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದ್ದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ನಂಜರಾಯಪಟ್ಟಣ ಗ್ರಾಪಂ ಅಧ್ಯಕ್ಷ ಸಿ.ಎಲ್.ವಿಶ್ವ, ಪಿಡಿಒ ರಾಜಶೇಖರ್ ಅವರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ನಂಜರಾಯಪಟ್ಟಣ ಗ್ರಾಪಂ ಅಧ್ಯಕ್ಷ ಸಿ.ಎಲ್.ವಿಶ್ವ ಮಾಹಿತಿ ನೀಡಿದ್ದಾರೆ.
Back to top button
error: Content is protected !!