ಪ್ರಶಸ್ತಿ
2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದ ನಂಜರಾಯಪಟ್ಟಣ ಗ್ರಾಮಪಂಚಾಯ್ತಿ


ಕುಶಾಲನಗರ, ಡಿ 01: 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದ್ದ ನಂಜರಾಯಪಟ್ಟಣ ಗ್ರಾಮಪಂಚಾಯ್ತಿಗೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾನ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ನಂಜರಾಯಪಟ್ಟಣ ಗ್ರಾಪಂ ಅಧ್ಯಕ್ಷ ಸಿ.ಎಲ್.ವಿಶ್ವ, ಪಿಡಿಒ ರಾಜಶೇಖರ್ ಅವರು ಪ್ರಶಸ್ತಿ ಸ್ವೀಕಾರ ಮಾಡಿದರು.