ಸಭೆ

ಗುಡ್ಡೆಹೊಸೂರು ಗ್ರಾಮ ಪಂಚಾಯತಿ ತುರ್ತು ಸಭೆ

ಕುಶಾಲನಗರ, ಆ 02:ಗುಡ್ಡೆಹೊಸೂರು ಗ್ರಾಮ ಪಂಚಾಯತಿ ತುರ್ತು ಸಭೆ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಪಂ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ತೆಪ್ಪದಕಂಡಿಯ ಬಳಿ ಕಾವೇರಿ ನದಿ ನೀರಿನ ಪ್ರಮಾಣ ಪ್ರತಿ ವರ್ಷ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು ಇಲ್ಲಿರುವ ನಿವಾಸಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಂದಾಯ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿಯ ತುರ್ತು ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.
ಇದೇ ಸಂದರ್ಭ ಗುಡ್ಡೆಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಭವಿಸಿದ ಮಳೆ ಹಾನಿ ಕುರಿತು ಪರಿಶೀಲಿಸಿ, ಕಂದಾಯ ಇಲಾಖೆಗೆ ಈಗಾಗಲೇ ಸಲ್ಲಿಸಲಾದ ಪ್ರಸ್ತಾವನೆಯನ್ನು ಮರು ಪರಿಶೀಲಿಸಲಾಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಟ್ಟು ಮಾದಪ್ಪ ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!