ಕುಶಾಲನಗರ, ಜು 29: ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಕುರಿತು ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ರಾಷ್ಟ್ರಮಟ್ಟದ ಉಸ್ತುವಾರಿ ಪರಿಶೀಲನಾ ತಂಡವು ಇಂದು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲಿಸಿತು.
ರಾಷ್ಟ್ರೀಯ ಪರಿಶೀಲನಾ ತಂಡದ ಸದಸ್ಯರುಗಳಾದ ಶುಭಂ ಲಕ್ಷ್ಮಣ್ ತಾವೇ ಹಾಗೂ ರವಿರತ ರಾಮ್ರಾವ್ ಷಟ್ಕೆ ಇವರುಗಳು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಫಲಾನುಭವಿಗಳೊಂದಿಗೆ ಸಮಾಲೋಚನೆ ನಡೆಸಿದರು. ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ಪಿಂಚಣಿ, ವಿಶೇಷ ಚೇತನರ ಪಿಂಚಣಿ ಸಕಾಲಕ್ಕೆ ತಲುಪುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಂಡರು.
NRLM ಅಡಿಯಲ್ಲಿ ವಿವಿಧ ಸ್ವಸಹಾಯ ಸಂಘಗಳು ಕೈಗೊಂಡಿರುವ ವಿನೂತನ ಕಾರ್ಯ ಚಟುವಟಿಕೆಗಳ ಬಗೆ ಮಾಹಿತಿ ಪಡೆದುಕೊಂಡರು. ಮಹಿಳಾ ಸ್ವಸ್ತಾಹಾಯ ಗುಂಪುಗಳನ್ನು ಕ್ರಿಯಾತ್ಮಕವಾಗಿ ಬಳಸಿಕೊಳ್ಳಲು ಬಹಳಷ್ಟು ಅವಕಾಶಗಳಿದ್ದು ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಅಭಿಪ್ರಾಯಪಟ್ಟರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ನೋಂದಾಯಿತ ಕೂಲಿ ಕಾರ್ಮಿಕರೊಂದಿಗೆ ಸಮಾಲೋಚನೆ ನಡೆಸಿದ ತಂಡವು ಗ್ರಾಮ ಪಂಚಾಯಿತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿತು
ಪರಿಶೀಲನ ತಂಡದೊಂದಿಗೆ ಸೋಮವಾರಪೇಟೆ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳಾದ ಪರಮೇಶ್ ಕುಮಾರ್ ಹಾಗೂ ಸಹಾಯಕ ನಿರ್ದೇಶಕರಾದ ಶ್ರೀನಿವಾಸ್ ಮತ್ತು ರಾಕೇಶ್ ರವರು ಹಾಜರಿದ್ದರು
ಈ ಸಂದರ್ಭ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಸೌಮ್ಯ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಂ ಆರ್ ಸು ಮೇಶ್ ಹಾಗೂ ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು
Back to top button
error: Content is protected !!