ಕಾರ್ಯಕ್ರಮ

ಕುಶಾಲನಗರದ ಕನ್ನಡ ಭಾರತಿ ಪದವಿಪೂರ್ವ ಕಾಲೇಜು ಹಾಗೂ ಪ್ರಥಮ ದರ್ಜೆ ‌ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ

ಕುಶಾಲನಗರ, ಡಿ 14: ವಿದ್ಯಾರ್ಥಿಗಳ ಶಿಸ್ತು, ಸಂಯಮ ಅಳವಡಿಸಿಕೊಂಡು ಶ್ರದ್ದೆಯಿಂದ ಅಭ್ಯಾಸ ಮಾಡಿ ಶೈಕ್ಷಣಿಕ ಜೀವನದಲ್ಲಿ ಯಶಸ್ಸು ಗಳಿಸಬೇಕಿದೆ ಎಂದು ಕುಶಾಲನಗರ ತಹಸೀಲ್ದಾರ್ ಕಿರಣ್ ಜಿ ಗೌರಯ್ಯ ಹೇಳಿದರು.

ಕುಶಾಲನಗರದ ಕನ್ನಡ ಭಾರತಿ ಪದವಿಪೂರ್ವ ಕಾಲೇಜು ಹಾಗೂ ಪ್ರಥಮ ದರ್ಜೆ ‌ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ ಕೆಬಿ ಉತ್ಸವ 2025  ಸಮಾರಂಭ ಉದ್ಘಾಟಿಸಿದ ಅವರು ಮಾತನಾಡಿದರು. ವಾರ್ಷಿಕೋತ್ಸವ ಎಂದರೆ ವಿದ್ಯಾರ್ಥಿಗಳಿಗೆ ಹಬ್ಬವಿದ್ದಂತೆ. ಸಂಸ್ಥೆಯ ವಿದ್ಯಾರ್ಥಿಗಳ ಪೋಷಕರು, ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಿದೆ. ವಿದ್ಯಾರ್ಥಿಗಳು ಸಂಸ್ಕಾರ, ಮೌಲ್ಯಗಳನ್ನು ಅಳವಡಿಸಿಕೊಂಡು ಗುರುಹಿರಿಯರ‌ ಬಗ್ಗೆ ಗೌರವ ತೋರುವುದು ಅಗತ್ಯವಿದೆ. ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಕಠಿಣ ಪರಿಶ್ರಮದಿಂದ ಕಲಿತು ಭವಿಷ್ಯವನ್ನು ರೂಪಿಸಿಕೊಳ್ಳಬೇಕಿದೆ ಎಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಪುಟ್ಟರಾಜು ಅವರು ಮುಖ್ಯ‌ ಭಾಷಣ ಮಾಡಿದರು. ಶಿಕ್ಷಣ ವಿದ್ಯಾರ್ಥಿಗಳ ‌ಮನಸ್ಸನ್ನು, ಬೌದ್ದಿಕ ಸಾಮರ್ಥ್ಯವನ್ನು ವಿಕಸನಗೊಳಿಸುತ್ತದೆ. ಶಿಕ್ಷಣದ ಮೂಲ, ಪಠ್ಯಪುಸ್ತಕಗಳಲ್ಲಿನ ವಿಚಾರಗಳ ಇತಿಹಾಸದ ಬಗ್ಗೆ ಅರಿವು ಹೊಂದುವುದು ಅವಶ್ಯಕವಿದೆ. ಪಡೆದ ಶಿಕ್ಷಣಕ್ಕೆ ತಕ್ಕಂತಹ ಉತ್ತಮ ನಡವಳಿಕೆ ವಿದ್ಯಾರ್ಥಿಗಳಲ್ಲಿ ಕಂಡುಬರಬೇಕಿದೆ ಎಂದರು.
ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ‌ ಕ್ಷೀಣಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು ಈ ಬಗ್ಗೆ ಪೋಷಕರು, ವಿದ್ಯಾರ್ಥಿಗಳು ಚಿಂತನೆ ಹರಿಸಬೇಕಿದೆ ಎಂದು ಕರೆ ನೀಡಿದರು.

ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಶಾಂತಕುಮಾರ್ ಹಾಗೂ
ಪ್ರಥಮ ದರ್ಜೆ ಕಾಲೇಜು ಕನ್ನಡ ಉಪನ್ಯಾಸಕಿ ಸ್ಮಿತಾ ಅವರು 2025-26ನೇ ಸಾಲಿನ ಶೈಕ್ಷಣಿಕ ವರದಿ ವಾಚಿಸಿದರು.

ಕುಶಾಲನಗರದ ಪ್ರಧಾನ ಗೌತಮ್ ವಿದ್ಯಾ ಟ್ರಸ್ಟ್
ಕಾರ್ಯದರ್ಶಿ ರಾಮಕೃಷ್ಣ ಬಿ ಅಧ್ಯಕ್ಷತೆ ವಹಿಸಿದ್ದರು.

ಅತಿಥಿಗಳಾಗಿ ಬೈಲುಕೊಪ್ಪೆಯ ಸರಕಾರಿ ಪ್ರೌಢಶಾಲಾ ಸಹ ಶಿಕ್ಷಕ
ಮಂಜುನಾಥ್ ಬಿ, ಆಡಳಿತಾಧಿಕಾರಿ ಜೈವರ್ಧನ್, ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ರುದ್ರಪ್ಪ
ಸೇರಿದಂತೆ ಉಪನ್ಯಾಸಕ ವೃಂದದವರು, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳ ಪೋಷಕರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!