ಆರೋಪ

ಕುಶಾಲನಗರದಲ್ಲಿ ವಾಹನ ಪಾರ್ಕಿಂಗ್ ಅವ್ಯವಸ್ಥೆ: ಹೆಚ್ಚಿದ ವಾಹನ ದಟ್ಟಣೆ: ಕ್ರಮಕ್ಕೆ ಕರವೇ ಒತ್ತಾಯ

ಅಡ್ಡಾದಿಡ್ಡಿ ವಾಹನ ನಿಲುಗಡೆಯಿಂದ ಉಂಟಾಗುತ್ತಿರುವ ಸಮಸ್ಯೆ ಸರಿಪಡಿಸಲು ಒತ್ತಾಯ

ಕುಶಾಲನಗರ, ಡಿ 19: ಕುಶಾಲನಗರ ವ್ಯಾಪ್ತಿಯಲ್ಲಿ ವಾಹನದಟ್ಟಣೆ ಹೆಚ್ಚಾಗಿದ್ದು ಸುಗಮ ಸಂಚಾರಕ್ಕೆ ಅಡಚಣೆ ಎದುರಾಗಿದೆ. ರಸ್ತೆ ಇಕ್ಕೆಲಗಳಲ್ಲಿ ಅವ್ಯವಸ್ಥಿತವಾಗಿ ವಾಹನ ನಿಲುಗಡೆಯಿಂದ ವಾಹನಗಳ ಸಂಚಾರಕ್ಕೆ ಅಡ್ಡಿ ಎದುರಾಗಿದೆ ಎಂದು ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಆರೋಪಿಸಿದ್ದಾರೆ.

ಶಾಲಾ ಸಮಯಗಳಲ್ಲಿ ವಾಹನ ದಟ್ಟಣೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಬೈಪಾಸ್ ರಸ್ತೆಯಲ್ಲಿ ಎರಡೂ ಬದಿಗಳಲ್ಲಿ ಸೂಕ್ತವಾಗಿ ವಾಹನಗಳ ಪಾರ್ಕಿಂಗ್ ಮಾಡದ ಹಿನ್ನೆಲೆಯಲ್ಲಿ ಸಂಚಾರಕ್ಕೆ‌ ಅಡಚಣೆ ಎದುರಾಗುತ್ತಿದೆ. ಸಮುದಾಯ ಆರೋಗ್ಯ ಕೇಂದ್ರದಿಂದ ತೆರಳುವ ಆಂಬ್ಯುಲೆನ್ಸ್ ಗಳಿಗೂ ಅಡ್ಡಿ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆಯಾಗುತ್ತಿದೆಯೋ ಗಮನಹರಿಸಿ ಸಮರ್ಪಕ ಪಾರ್ಕಿಂಗ್ ಗೆ ವ್ಯವಸ್ಥೆ ಕಲ್ಪಿಸುವಂತೆ ಬಿ.ಎ.ದಿನೇಶ್ ಸಂಬಂಧಿಸಿದವರನ್ನು ಆಗ್ರಹಿಸಿದ್ದಾರೆ.
ಈ ಸಂದರ್ಭ ಜಿಲ್ಲಾ ಉಪಾಧ್ಯಕ್ಷ ರಾಜಶೇಖರ್, ತಾಲ್ಲೂಕು ಸಂಚಾಲಕ ರಂಗಸ್ವಾಮಿ, ಜಿಲ್ಲಾ ಪದಾಧಿಕಾರಿ ಸತೀಶ್ ಹಾಗೂ ಆಚಾರ್ಯ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!