ಕುಶಾಲನಗರ, ಡಿ 27:ಹೆಬ್ಬಾಲೆ ವಿದ್ಯಾವರ್ಧಕ ಸಂಘ, ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಶ್ರೀ ಕಾವೇರಿ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ನಡೆಯಿತು.
ಹೆಬ್ಬಾಲೆ ಗ್ರಾಪಂ ಅಧ್ಯಕ್ಷೆ ಅರುಣಕುಮಾರಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸರಕಾರಿ ಶಾಲೆಗಳಲ್ಲಿ ಕೂಡ ಗುಣಮಟ್ಟದ ಶಿಕ್ಷಣ ಲಭಿಸುತ್ತಿದೆ. ವಿದ್ಯಾರ್ಥಿಗಳು ಗುರುಗಳ ಮಾರ್ಗದರ್ಶನ ಪಡೆದು ನಿರಂತರ ಅಧ್ಯಯನದೊಂದಿಗೆ, ಸದ್ಗುಣಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಉನ್ನತ ಸ್ಥಾನ ಅಲಂಕರಿಸುವಂತೆ ಶುಭ ಕೋರಿದರು.
ಸಮಾರೋಪ ಭಾಷಣ ಮಾಡಿದ ಮೈಸೂರು ಮಹಾರಾಜ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಸಿ.ಕೆ.ಪುಟ್ಟಸೋಮಾಚಾರ್ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯದೊಂದಿಗೆ ಇತರೆ ವಿಚಾರಗಳ ಬಗ್ಗೆ ಕೂಡ ಹೆಚ್ಚಿನ ಅರಿವು ಹೊಂದಬೇಕಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ನಿಟ್ಟಿನಲ್ಲಿ ನಿರಂತರ ಅಧ್ಯಯನ ಶೀಲರಾಗಿ, ತಂತ್ರಜ್ಞಾನಗಳನ್ನು ಸದ್ಬಳಕೆ ಮಾಡಿಕೊಂಡು ಜ್ಞಾನವಂತರಾಗುವಂತೆ ಕರೆ ನೀಡಿದರು.
ನೇರುಗಳಲೆ ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ
ರಾಜೇಶ್ವರಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಶ್ರದ್ದೆಯಿಂದ ಕಲಿಕೆ ಮಾಡುವಂತೆ ಸಲಹ ನೀಡಿದರು.
ಕೊಡಗು ಜಿಪಂ ಮಾಜಿ ಅಧ್ಯಕ್ಷ ಹೆಚ್.ಎಸ್.ಅಶೋಕ್, ಮಾಜಿ ಸದಸ್ಯ ನಟೇಶ್ ಗೌಡ ಅವರು ಮಾತನಾಡಿದರು.
ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೆಚ್.ವಿ.ಶಿವಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರೌಢಶಾಲಾ ಮುಖ್ಯ ಶಿಕ್ಷಕ
ಬಸವರಾಜಶೆಟ್ಟಿ ವಾರ್ಷಿಕ ಶೈಕ್ಷಣಿಕ ವರದಿ ವಾಚಿಸಿದರು.
ಇದೇ ಸಂದರ್ಭ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ಈ ಸಂದರ್ಭ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಹೆಚ್.ಕೆ.ಪ್ರಸನ್ನ, ಕಾರ್ಯದರ್ಶಿ ಹೆಚ್.ಎಸ್. ರಾಜಶೇಖರ್, ನಿರ್ದೇಶಕರಾದ ಹಳಗೋಟೆ ಹೆಚ್.ಪಿ.ಮಂಜುನಾಥ್, ಹೆಚ್.ಪಿ.ಮಂಜುನಾಥ್ (ಬಾಲಿವುಡ್), ಹೆಚ್.ಡಿ.ಪುಟ್ಟರಾಜು, ಹೆಚ್.ಬಿ.ಮಹದೇವ, ಹೆಚ್.ಇ.ರವಿ, ಸಿ.ಆರ್.ಪಿ.ಆದರ್ಶ್, ಬನಶಂಕರಿ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಹೆಚ್.ಎನ್.ಸುಬ್ರಹ್ಮಣ್ಯ ಸೇರಿದಂತೆ ವಿವಿಧ ಶಾಲೆಯ ಮುಖ್ಯ ಶಿಕ್ಷಕರು, ಹೆಬ್ಬಾಲೆ ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಪೋಷಕರು ಇದ್ದರು.
ಇದೇ ಸಂದರ್ಭ ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
Back to top button
error: Content is protected !!