ಕುಶಾಲನಗರ, ಮೇ 26: ಎಲ್ಲೆಡೆ ವ್ಯಾಪಕ ಮಳೆಯಾಗುತ್ತಿರುವ ಕಾರಣ ಕಾವೇರಿ ನದಿಯಲ್ಲಿ ನೀರಿನ ಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಕುಶಾಲನಗರ ನದಿ ತಟದ ಪ್ರವಾಹ ಪೀಡಿತ ಬಡಾವಣೆಗಳಲ್ಲಿ ಮನೆಮನೆಗೆ ಪುರಸಭೆಯಿಂದ ಎಚ್ಚರಿಕೆ ನೋಟಿಸ್ ನೀಡುವ ಕಾರ್ಯ ಆರಂಭಿಸಲಾಗಿದೆ. ಪ್ರವಾಹ ಸಂದರ್ಭ ಸಂಭಾವ್ಯ ಅನಾಹುತಗಳನ್ನು ಎದುರಿಸಲು ಸಜ್ಜಾಗುವಂತೆ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿ ನಿವಾಸಿಗಳಿಗೆ ನೋಟಿಸ್ ಜಾರಿ ಮಾಡಲಾಯಿತು.
ಈ ಸಂದರ್ಭ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಪುರಸಭೆ ಮುಖ್ಯಾಧಿಕಾರಿ ಗಿರೀಶ್ ಹಾಗೂ ಸದಸ್ಯರು ಅಧಿಕಾರಿ ವರ್ಗದವರು ಇದ್ದರು.
Back to top button
error: Content is protected !!