ಕುಶಾಲನಗರ, ಡಿ 30:: ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಹಾಗೂ ವಿವಿಧ ಜಮಾಯತ್ ಸಮಿತಿ ಹಾಗೂ ವಿವಿಧ ಮಸೀದಿಗಳ ವತಿಯಿಂದ ಬುಧವಾರ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಡಾ.ಮಂತರ್ ಗೌಡ ಅವರಿಗೆ ಆಬಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು.
ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಭಿನಂದನಾ ಸಮಾರಂಭ ಉದ್ದೇಶಿಸಿ ಮಾತನಾಡಿದ ಘಟಕದ ಜಿಲ್ಲಾಧ್ಯಕ್ಷ ಹನೀಫ್,ಕೊಡಗು ಜಿಲ್ಲೆಯ ವಕ್ಪ್ ಬೋರ್ಡ್ ಮತ್ತು ಮಸೀದಿಗಳಿಗೆ ಹಾಗೂ ಮೌಲಾನಾ ಆಜಾದ್ ಪಾಠ ಶಾಲೆ ಹಾಗೂ ಮುಸ್ಲಿಂ ಕಾಲೊನಿಗಳ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ರೂ.20.01 ಕೋಟಿ ಅನುದಾನವನ್ನು ಒದಗಿಸಿಕೊಟ್ಟ ಶಾಸಕ ಡಾ.ಮಂತರ್ ಗೌಡ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ವಸತಿ ಸಚಿವ ಜಮೀರ್ ಅವರನ್ನು ಕೊಡಗಿಗೆ ಕರೆಸಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುತ್ತದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕಳೆದ ಇಪ್ಪತ್ತೈದು ವರ್ಷಗಳ ಹಿಂದೆ ಇದ್ದ ಬಿಜೆಪಿ ಶಾಸಕರು ಅಲ್ಪಸಂಖ್ಯಾತರನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದರು.
ಇದೀಗ ಜಾತ್ಯಾತೀತವಾದ ಹಿಂದುಳಿದ ವರ್ಗಗಳ ಅಭಿವೃದ್ಧಿ ಪರವಾದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ.ಕೊಡಗು ಜಿಲ್ಲೆಯಲ್ಲೂ ಇಬ್ಬರು ಯುವಕರು ಕಾಂಗ್ರೆಸ್ ನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಎರಡೂವರೆ ವರ್ಷದಲ್ಲಿ ಅಭಿವೃದ್ಧಿಯ ನಾಗಲೋಟದಲ್ಲಿ ಇದ್ದಾರೆ. ಈ ಹಿಂದೆ ಆಗದ ಬಹುತೇಕ ಯೋಜನೆಗಳನ್ನು ಶಾಸಕರು ಅಭಿವೃದ್ಧಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಅದೇ ರೀತಿ ಅಲ್ಪಸಂಖ್ಯಾತರ ಅಭಿವೃದ್ಧಿಗೂ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು. ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕೆಪಿಸಿಸಿ ಮುಖಂಡರಾದ ಕೆ.ಪಿ.ಚಂದ್ರಕಲಾ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಅಬ್ದುಲ್ ರಜಾಕ್, ನಗರಾಧ್ಯಕ್ಷ ಇರ್ಫಾನ್ ಪ್ರಮುಖರಾದ ಅಜೀಜ್, ನಯಾಜ್ ಮತ್ತಿತರರು ಇದ್ದರು.
Back to top button
error: Content is protected !!